Dehali News : ಸಿದ್ದರಾಮಯ್ಯನವರು ಎರಡನೇ ಬಾರಿಗೆ ಮುಖ್ಯಮಂತ್ರಿಯಾದ ಬಳಿಕ ಇದೇ ಮೊದಲ ಬಾರಿಗೆ ಮೋದಿಯವರನ್ನು ಭೇಟಿ ಮಾಡಿದ್ದಾರೆ. ಇನ್ನು ಇದೇ ವೇಳೆ ಸಿದ್ದರಾಮಯ್ಯ, ಮೋದಿಯವರಿಗೆ ಮೈಸೂರು ಪೇಟ, ಶಾಲು ಹಾಗೂ ದಸರಾ ಅಂಬಾರಿಯ ಸ್ಮರಣಿಕೆ ನೀಡಿ ಗೌರವಿಸಿದರು.
ಇಂದು ಅಂದರೆ ಆಗಸ್ಟ್ 03ರಂದು ದೆಹಲಿಯ ಸಂಸತ್ ಭವನದಲ್ಲಿ ತಮ್ಮ ಜನ್ಮದಿನದಂದೇ ಪ್ರಧಾನಿಯವರನ್ನ ಭೇಟಿ ಮಾಡಿರುವುದು ವಿಶೇಷವಾಗಿದೆ. ಇನ್ನು ಇದೇ ವೇಳೆ ಸಿದ್ದರಾಮಯ್ಯ, ಮೋದಿಯವರಿಗೆ ವಿಶೇಷ ಉಡುಗೊರೆ ನೀಡಿದ್ದಾರೆ.
ಮೋದಿ ಜೊತೆಗೆ ಐದು ನಿಮಿಷ ಮಾತುಕತೆ ನಡೆಸಿದ ಬಳಿಕ ಸಿದ್ದರಾಮಯ್ಯ ಅವರು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿ ಮಾಡಿದರು.ದೆಹಲಿಯಲ್ಲಿ ರಾಜನಾಥ್ ಸಿಂಗ್ ಭೇಟಿಯಾದ ಸಿದ್ದರಾಮಯ್ಯ ಈ ಬಾರಿಯ ಮೈಸೂರು ದಸರಾ ಉತ್ಸವದಲ್ಲಿ ಏರ್ಶೋ ಆಯೋಜಿಸಲು ಮನವಿ ಮಾಡಿದರು ಎನ್ನಲಾಗಿದೆ.
Gyanavapi: ವೈಜ್ಞಾನಿಕ ಸಮೀಕ್ಷೆಗೆ ಅನುಮತಿ ನೀಡಿದ ಅಲಹಾಬಾದ್ ಹೈ ಕೋರ್ಟ್
DK Shivakumar : “ಇಂಡಿಯಾ”ಗೆ ಕನಿಷ್ಟ 20 ಲೋಕಸಭೆ ಸೀಟುಗಳನ್ನು ಗೆಲ್ಲಿಸಿ ಕೊಡುತ್ತೇವೆ : ಡಿಸಿಎಂ ಡಿ.ಕೆ. ಶಿವಕುಮಾರ್