ಬೆಂಗಳೂರು: ಸಿಎಂ ಯಡಿಯೂರಪ್ಪ ಅನರ್ಹ ಶಾಸಕರ ರಾಜೀನಾಮೆ ಕುರಿತಂತೆ ಮಾತನಾಡಿರುವ ಆಡಿಯೋ ಲೀಕ್ ಪ್ರಕರಣ ದಿನಕ್ಕೊಂದು ಸ್ವರೂಪ ಪಡೆಯುತ್ತಿದೆ.ಈ ಬಗ್ಗೆ ವಿರೋಧ ಪಕ್ಷದ ನಾಯಕ, ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.ಈ ಟ್ವೀಟ್ ನಲ್ಲಿ ಸಿದ್ದರಾಮಯ್ಯ ಬಿಜೆಪಿಯ ಹಿರಿಯ ನಾಯಕರನ್ನ ಟಾರ್ಗೆಟ್ ಮಾಡಿದ್ದು, ಮುಖ್ಯಮಂತ್ರಿ ಯಡಿಯೂರಪ್ಪನವರಿಗೆ ಕೆಟ್ಟ ಹೆಸರು ತಂದು ಅವರನ್ನು ಮುಖ್ಯಮಂತ್ರಿ ಹುದ್ದೆಯಿಂದ ಕೆಳಗಿಳಿಸಲು ಬಿಜೆಪಿ ಕೋರ್ ಕಮಿಟಿಯಲ್ಲಿರುವ ಕೆಲ ಹಿರಿಯ ನಾಯಕರೇ ಆಡಿಯೋ ಲೀಕ್ ಮಾಡಿಸಿದ್ದಾರೆ ಎಂದು ಟ್ವೀಟ್ ಮಾಡಿದ್ದಾರೆ
ಸಿದ್ದು ಟ್ವೀಟ್ ನಲ್ಲಿ ಏನಿದೇ..?
ಮುಖ್ಯಮಂತ್ರಿಗೆ ಬಿಎಸ್ ವೈ ಅವರಿಗೆ ಕೆಟ್ಟ ಹೆಸರು ಬಂದು, ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲಿ ಎಂಬ ಕಾರಣಕ್ಕೆ ಆಡಿಯೋ ಲೀಕ್ ಮಾಡಿದ್ದಾರೆ.ಹಿರಿಯ ನಾಯಕರಷ್ಟೇ ಇರುವ ಬಿಜೆಪಿಯ ಕೋರ್ ಕಮಿಟಿಯಲ್ಲೇ ಯಡಿಯೂರಪ್ಪಅವರಿಗೆ ಆಗದವರೂ ಇದ್ದಾರೆ.
ಸ್ಪಷ್ಟನೆ: ಇನ್ನೂ, ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ಧರ್ಮಸ್ಥಳದಲ್ಲಿ ಸಿದ್ದರಾಮಯ್ಯ ತಮ್ಮ ಬೆಂಬಲಿಗ ಶಾಸಕರೊಂದಿಗೆ ಕುಮಾರಸ್ವಾಮಿ ನೇತೃತ್ವದ ಸರ್ಕಾರ ಬೀಳಿಸಲು ಮಾತುಕತೆ ನಡೆಸಿದ್ದರು ಎನ್ನಲಾದ ಆಡಿಯೋ ಲೀಕ್ ಕುರಿತಂತೆ ಕೂಡ, ಸಿದ್ದು ಟ್ವೀಟ್ ಮಾಡಿ, ನಮ್ಮ 80 ಜನ ಶಾಸಕರಿದ್ದು, ಜೆಡಿಎಸ್ಗೆ ಮುಖ್ಯಮಂತ್ರಿ ಸ್ಥಾನ ಬಿಟ್ಟಕೊಟ್ರಲ್ಲ ಎಂದು ನಮ್ಮ ಕಾರ್ಯಕರ್ತರೊಬ್ಬರು ಕೇಳಿದ್ದರು. ಅದಕ್ಕೆ ಲೋಕಸಭಾ ಚುನಾವಣೆ ಆಗುವವರೆಗೂ ತಾಳ್ಮೆಯಿಂದಿರಿ,ಚುನಾವಣೆಯ ನಂತರ ಕೂತು ಮಾತನಾಡೋಣ ಎಂದಿದ್ದೆ.ನಾನು ಸರ್ಕಾರ ಬೀಳಿಸುತ್ತೇನೆ ಎಂದು ಹೇಳಿಲ್ಲ.ಆ ಪ್ರಯತ್ನವನ್ನೂ ಮಾಡಿಲ್ಲ ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.