ಸಿಎಂ ಸಿದ್ದರಾಮಯ್ಯ ವಿರುದ್ಧದ ರಾಜ್ಯಪಾಲರ ಪ್ರಾಸಿಕ್ಯೂಷನ್ಗೆ ಸಂಬಂಧಿಸಿದಂತೆ ಡಿಸಿಎಂ ಡಿಕೆ ಶಿವಕುಮಾರ್, ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಿದ್ದರಾಮಯ್ಯ ಅವರು ಯಾವುದೇ ಕಾರಣಕ್ಕೂ ರಾಜೀನಾಮೆ ಕೊಡಲ್ಲ. ಸಿಎಂ ರಾಜೀನಾಮೆ ಕೊಡುವ ಪ್ರಶ್ನೆಯೇ ಇಲ್ಲ ಎಂದು ಡಿಕೆಶಿ ಹೇಳಿದ್ದಾರೆ.
136 ಶಾಸಕರು ಸಿದ್ದರಾಮಯ್ಯ ಪರ ನಿಲ್ಲುತ್ತೇವೆ. ನಾವು ಎಲ್ಲಾ ರೀತಿಯ ಕಾನೂನು ಹೋರಾಟಕ್ಕೆ ಸಿದ್ಧವಾಗಿದ್ದೇವೆ ಎಂದು ಬೆಂಗಳೂರಿನಲ್ಲಿ ಡಿಕೆಶಿ ಕಿಡಿಕಾರಿದ್ದಾರೆ.
ಸಿದ್ದರಾಮಯ್ಯ ವಿರುದ್ಧ ದಾಖಲಾಗಿರೋದು ರಾಜಕೀಯ ಪ್ರೇರಿತ ದೂರು. ಬಿಜೆಪಿಯವರು ರಾಜ್ಯಪಾಲರ ಕಚೇರಿ ಬಳಸಿಕೊಂಡು ರಾಜಕಾರಣ ಮಾಡ್ತಿದ್ದಾರೆ. ಸಿಎಂ ವಿಚಾರದಲ್ಲಿ ರಾಜ್ಯಪಾಲರು ತರಾತುರಿಯಲ್ಲಿ ನಿರ್ಧಾರ ಕೈಗೊಂಡಿದ್ದಾರೆ. ಸರ್ಕಾರ ಅಸ್ಥಿರಗೊಳಿಸುವ ಪ್ರಯತ್ನ ನಡೆಯುತ್ತಿದೆ. ಹಿಂದುಳಿದ ನಾಯಕ ಎರಡನೇ ಬಾರಿಗೆ ಸಿಎಂ ಆಗಿದ್ದನ್ನು ಬಿಜೆಪಿಯಿಂದ ಸಹಿಸಿಕೊಳ್ಳಲು ಆಗ್ತಿಲ್ಲ. ನಾವು ಸಂವಿಧಾನ ರಕ್ಷಣೆ ಮಾಡುತ್ತೇವೆ ಎಂದು ಡಿಕೆಶಿ ಹೇಳಿದ್ದಾರೆ.