ಬೆಂಗಳೂರು: ಮೈತ್ರಿ ಮೇಲೆ ಮುನಿಸಿಕೊಂಡು ರಾಜೀನಾಮೆ ನೀಡಿ ದೋಸ್ತಿಗಳನ್ನು ಪೇಚಾಟಕ್ಕೆ ಸಿಲುಕಿಸಿರೋ ಶಾಸಕರಿಗೆ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಭರ್ಜರಿ ಆಫರ್ ನೀಡಿದ್ದಾರೆ. ಬಿಜೆಪಿಯ ಯಾವುದೇ ಆಮಿಷಗಳಿಗೆ ಒಳಗಾಗಬೇಡಿ ನಿಮಗೆ ಸಚಿವ ಸ್ಥಾನ ನೀಡ್ತೇವೆ ಅಂತ ಅತೃಪ್ತರಿಗೆ ಮತ್ತೊಂದು ಅವಕಾಶ ನೀಡಿದ್ದಾರೆ.
ಶಾಸಕರು ಮತ್ತು ಸಚಿವರುಗಳಿಗೆ ಉಪಹಾರಕೂಟದ ಹೆಸರಿನಲ್ಲಿ ಆಹ್ವಾನಿಸಿ ಅವರಿಂದ ಸಾಮೂಹಿಕ ರಾಜೀನಾಮೆ ಪಡೆಯುವಲ್ಲಿ ಯಶಸ್ವಿಯಾಗಿರೋ ಕಾಂಗ್ರೆಸ್ ನಾಯಕರಿಗೆ ಇದೀಗ ಅತೃಪ್ತ ಶಾಸಕರನ್ನು ಒಲಿಸಿಕೊಳ್ಳೋ ದೊಡ್ಡ ಜವಾಬ್ದಾರಿ ಇದೆ. ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ನಮ್ಮ ಸಚಿವರು ಒಕ್ಕೊರಲಿನಿಂದ ಸಾಮೂಹಿಕ ರಾಜೀನಾಮೆ ನೀಡಿದ್ದಾರೆ. ಪಕ್ಷಕ್ಕೆ ನಾವು ಎಂದಿಗೂ ಬದ್ಧರಾಗಿದ್ದೇವೆ ಅಂತ ನಮ್ಮ ನಿರ್ಧಾರಕ್ಕೆ ಬೆಂಬಲ ನೀಡಿದ್ದಾರೆ.
ಇನ್ನು ಸಾಮೂಹಿಕ ರಾಜೀನಾಮೆಯಿಂದಾಗಿ ರಾಜ್ಯ ಸಚಿವ ಸಂಪುಟ ಪುನಾರಚನೆಯಾಗಲಿದೆ. ಸಚಿವ ಸ್ಥಾನಾಕಾಂಕ್ಷಿಗಳಾಗಿದ್ದ ಶಾಸಕರಿಗೆ ನಾವು ಮಂತ್ರಿಗಿರಿ ಕೊಡ್ತೇವೆ. ಬಿಜೆಪಿಯ ಯಾವುದೇ ಆಮಿಷಗಳಿಗೆ ಒಳಗಾಗಬೇಡಿ. ನಿಮ್ಮ ಸಮಸ್ಯೆಗಳನ್ನು ನಾವು ಬಗೆಹರಿಸ್ತೇವೆ. ಆತುರದ ನಿರ್ಧಾರ ತೆಗೆದುಕೊಳ್ಳಬೇಡಿ ಅಂತ ಸಿದ್ದರಾಮಯ್ಯ ಇದೇ ವೇಳೆ ಅತೃಪ್ತ ಶಾಸಕರಿಗೆ ಮನವಿ ಮಾಡಿದ್ರು.
ಖರ್ಗೆ ಸಿಎಂ ಆಗ್ತಾರಾ..? ಮಿಸ್ ಮಾಡದೇ ಈ ವಿಡಿಯೋ ನೋಡಿ