Monday, December 23, 2024

Latest Posts

Siddaramaiah: ಯಾವುದೇ ಮಧ್ಯವರ್ತಿಗಳ ಕಾಟವಿಲ್ಲದೆ ಸವಲತ್ತುಗಳು ನೇರವಾಗಿ ತಲುಪಲಿವೆ.

- Advertisement -

ಬೆಂಗಳೂರು:  ನಮ್ಮ ಗ್ಯಾರಂಟಿ ಯೋಜನೆಗಳ ಕುರಿತೂ ಸಹ ಕೆಲವರು ನಕಾರಾತ್ಮಕ ಭಾವನೆಯನ್ನು ಸಮಾಜದಲ್ಲಿ ಉತ್ಪಾದಿಸಲು ಪ್ರಯತ್ನಿಸುತ್ತಿದ್ದಾರೆ. ಸರ್ಕಾರವು ರಾಜ್ಯದ ಭೌತಿಕ ಅಭಿವೃದ್ಧಿ ಮತ್ತು ಸಾಮಾಜಿಕ ಅಭಿವೃದ್ಧಿ ಎಂಬ ಎರಡೂ ಮಾದರಿಗಳನ್ನು ಒಂದೇ ರೀತಿಯಲ್ಲಿ ಪರಿಭಾವಿಸಿದೆ. ನಾವು ಸೃಷ್ಟಿಸಲು ಹೊರಟಿರುವ ಅಭಿವೃದ್ಧಿಯಲ್ಲಿ ರಾಜ್ಯದ ಸರಾಸರಿ 1.30 ಕೋಟಿ ಕುಟುಂಬಗಳಿಗೆ ಸೇರಿದ ಜನರು ಪಾಲ್ಗೊಳ್ಳುತ್ತಿದ್ದಾರೆ.

ಈ ಕೋಟಿ, ಕೋಟಿ ಜನರಿಗೆ ಯಾವುದೇ ಮಧ್ಯವರ್ತಿಗಳ ಕಾಟವಿಲ್ಲದೆ ಸವಲತ್ತುಗಳು ನೇರವಾಗಿ ತಲುಪಲಿವೆ. ಮತ್ತು ಸಮಗ್ರ ಮಹಿಳಾ ಸಶಕ್ತೀಕರಣ ಸಾಧ್ಯವಾಗಲಿದೆ. ಇದರಿಂದ ಕರ್ನಾಟಕ ಮಾದರಿ ಅಭಿವೃದ್ಧಿ ವ್ಯಾಖ್ಯಾನವು ಪ್ರಾರಂಭವಾಗಲಿದೆ. ನಮ್ಮ ಸರ್ಕಾರವು ಹಿಂದಿನ ಸರ್ಕಾರಗಳಿಗಿಂತಲೂ ಹೆಚ್ಚಿನ ಸಂಪನ್ಮೂಲಗಳನ್ನು ಮೂಲಭೂತ ಸೌಕರ್ಯಗಳಿಗೆ ವಿನಿಯೋಗಿಸಲು ಬದ್ಧವಾಗಿದೆ. ಸರ್ಕಾರದ ಆದಾಯಗಳ ಸಂಗ್ರಹವು ಸಹ ಶಕ್ತಿಯುತವಾಗಿದೆ.

ಡಾ.ಬಿ.ಆರ್. ಅಂಬೇಡ್ಕರ್ ಅವರು “ರಾಜಕೀಯ ಪ್ರಜಾಪ್ರಭುತ್ವವು ಸಾಮಾಜಿಕ ಪ್ರಜಾಪ್ರಭುತ್ವದ ತಳಹದಿಯ ಮೇಲೆ ನಿಂತಿದೆ. ಸಾಮಾಜಿಕ ಪ್ರಜಾಪ್ರಭುತ್ವ ಎಂದರೆ ಸ್ವಾತಂತ್ರ್ಯ, ಸಮಾನತೆ ಹಾಗೂ ಭ್ರಾತೃತ್ವಗಳನ್ನು ಬದುಕಿನ ತತ್ವಗಳೆಂದು ಗುರುತಿಸುವ ಜೀವನ ವಿಧಾನವಾಗಿದೆ” ಎಂದು ಹೇಳಿದ್ದಾರೆ. ರಾಜಕೀಯ ಪ್ರಜಾಪ್ರಭುತ್ವ ಗಟ್ಟಿಯಾಗಿರಬೇಕಾದರೆ ಅದರ ತಳಹದಿಯಾದ ಸಾಮಾಜಿಕ ಪ್ರಜಾಪ್ರಭುತ್ವವು ಸುಭದ್ರವಾಗಿರಬೇಕು ಎಂಬ ಅಂಬೇಡ್ಕರ್ ಅವರ ಆಶಯದಂತೆ ನಮ್ಮ ಸರ್ಕಾರ ಸಮ ಸಮಾಜ ನಿರ್ಮಾಣಕ್ಕೆ ಒತ್ತು ನೀಡಿದೆ.

ಮುಂಗಾರು ವಿಳಂಬವಾಗಿ ಪ್ರಾರಂಭವಾದ್ದರಿಂದ ರಾಜ್ಯದಲ್ಲಿ ಜೂನ್ ತಿಂಗಳಲ್ಲಿ ಬರದ ಛಾಯೆ ಇತ್ತು. ಜುಲೈ ತಿಂಗಳಲ್ಲಿ ಭಾರಿ ಮಳೆಯಾಗಿದ್ದರಿಂದ ಹಲವೆಡೆ ಪ್ರವಾಹ ಪರಿಸ್ಥಿತಿಯೂ ತಲೆದೋರಿತು. ಅತಿವೃಷ್ಟಿ, ಅನಾವೃಷ್ಟಿಗಳೆರಡನ್ನೂ ಸಮರ್ಥವಾಗಿ ಎದುರಿಸಲು ನಮ್ಮ ಸರ್ಕಾರ ಸಿದ್ಧವಾಗಿದೆ ಹಾಗೂ ಇದರಿಂದಾಗುವ ಹಾನಿಯನ್ನು ತಗ್ಗಿಸಲು ಎಲ್ಲ ರೀತಿಯ ಪ್ರಯತ್ನಗಳನ್ನೂ ಮಾಡುತ್ತಿದೆ.

ಗ್ಯಾರಂಟಿ ಯೋಜನೆಗಳ ಜೊತೆಗೆ ಕಳೆದ ಕೆಲವು ವರ್ಷಗಳಲ್ಲಿ ಸ್ಥಗಿತಗೊಂಡಿದ್ದ, ನಮ್ಮ ಸರ್ಕಾರದ ಹಿಂದಿನ ಅವಧಿಯಲ್ಲಿ ಯಶಸ್ವಿಯಾಗಿ ಜಾರಿಗೊಳಿಸಿದ್ದ ಕೃಷಿ ಭಾಗ್ಯ, ಅನುಗ್ರಹ ಯೋಜನೆ, ವಿದ್ಯಾಸಿರಿ, ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಸ್ಥಗಿತಗೊಂಡಿರುವ ವಿದ್ಯಾರ್ಥಿವೇತನ ಯೋಜನೆ ಸೇರಿದಂತೆ ಹಲವು ಯೋಜನೆಗಳ ಮರುಜಾರಿಗೆ ಕ್ರಮ ಕೈಗೊಳ್ಳಲಾಗುತ್ತಿದೆ.

Siddaramaiah: ಬ್ರಿಟಿಷರು ಕೈಗಳಿಗೆ ನಿರುದ್ಯೋಗವನ್ನು, ಹೊಟ್ಟೆಗೆ ಹಸಿವನ್ನು ಬಳುವಳಿಯಾಗಿ ಬಿಟ್ಟು ಹೋಗಿದ್ದಾರೆ..!

ಆಗಸ್ಟ್ 17ರಂದು ಮೈಸೂರಿನಲ್ಲಿ ಧನ್ವೀರ್ ನಾಯಕರಾಗಿ ನಟಿಸಿರುವ “ವಾಮನ” ಚಿತ್ರದ ಆಕ್ಷನ್ ಟೀಸರ್ ಬಿಡುಗಡೆ .

ಆಗಸ್ಟ್ 17ರಂದು ಮೈಸೂರಿನಲ್ಲಿ ಧನ್ವೀರ್ ನಾಯಕರಾಗಿ ನಟಿಸಿರುವ “ವಾಮನ” ಚಿತ್ರದ ಆಕ್ಷನ್ ಟೀಸರ್ ಬಿಡುಗಡೆ .

- Advertisement -

Latest Posts

Don't Miss