- Advertisement -
ಕರ್ನಾಟಕ ಟಿವಿ : ಇಡಿ ಅಧಿಕಾರಿಗಳು ಡಿಕೆಶಿ ಬಂಧಿಸಿರುವುದನ್ನ ಮಾಜಿ ಸಿಎಂ ಸಿದ್ದರಾಮಯ್ಯ ಖಂಡಿಸಿದ್ದಾರೆ. “ಸಹೋದ್ಯೋಗಿ ಡಿ.ಕೆ ಶಿವಕುಮಾರ್ ಅವರ ಬಂಧನ ಅತ್ಯಂತ ಖಂಡನೀಯ ಕೃತ್ಯ. ರಾಜಕೀಯ ಎದುರಾಳಿಗಳನ್ನ ರಾಜಕೀಯವಾಗಿ ಎದುರಿಸಲಾಗದೆ ಅಧಿಕಾರ ದುರುಪಯೋಗ ಮೂಲಕ ದಮನಿಸುವ ಯತ್ನ ಹೇಡಿತನದ್ದು, ಇಂತಹ ಕಷ್ಟದ ಕಾಲದಲ್ಲಿ ಕಾಂಗ್ರೆಸ್ ಪಕ್ಷ ಸಂಪೂರ್ಣವಾಗಿ ಶಿವಕುಮಾರ್ ಬೆಂಬಲಕ್ಕಿದೆ” ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.
- Advertisement -