ಬೆಂಗಳೂರು: ಸಿದ್ದರಾಮಯ್ಯ ಸದ್ಯ ಸಿಎಂ ಆಗಿದ್ದು, ಡಿ.ಕೆ.ಶಿವಕುಮಾರ್‌ಗೆ ಡಿಸಿಎಂ ಪಟ್ಟ ನೀಡಲಾಗಿದೆ. ಇಬ್ಬರೂ ಶನಿವಾರದಂದು ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಪ್ರಮಾಣವಚನ ಸ್ವೀಕರಿಸಿದ್ದಾರೆ.
ಈ ಬಗ್ಗೆ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದು, ಕನ್ನಡಿಗರ ಹಿತ ರಕ್ಷಣೆಗೆ ನಮ್ಮ ಕೈಗಳು ಸದಾ ಒಂದಾಗಿರಲಿದೆ. ಜನಪರ, ಪಾರದರ್ಶಕ, ಭ್ರಷ್ಟಾಚಾರ ರಹಿತ ಆಡಳಿತ ನೀಡುವ ಜೊತೆಗೆ ನಮ್ಮ ಎಲ್ಲಾ ಗ್ಯಾರೆಂಟಿಗಳನ್ನು ಈಡೇರಿಸಲು ಕಾಂಗ್ರೆಸ್ ಪಕ್ಷ ಒಂದು ಕುಟುಂಬವಾಗಿ ಕೆಲಸ ಮಾಡಲಿದೆ ಎಂದು ಬರೆದುಕೊಂಡಿದ್ದಾರೆ.
ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಗೆದ್ದಾಗಿಂದ ರಾಜ್ಯದಲ್ಲಿ ಯಾರನ್ನು ಸಿಎಂ ಮಾಡಬೇಕು ಎನ್ನುವ ಗೊಂದಲವಿತ್ತು. ಅಂದಿನಿಂದ ನಿನ್ನೆಯವರೆಗೂ ಕಾಂಗ್ರೆಸ್ ಹೈಕಮಾಂಡ್ ದೆಹಲಿಯಲ್ಲಿ ಈ ಬಗ್ಗೆ ಚರ್ಚೆ ನಡೆಸಿದ್ದು, ಫೈನಲಿ ಸಿದ್ದರಾಮಯ್ಯರನ್ನು 2ವರೆ ವರ್ಷ ಸಿಎಂ ಮಾಡಿ, ಡಿಕೆಶಿಯವರನ್ನ ಡಿಸಿಎಂ ಮಾಡಿ. ಬಳಿಕ ಇನ್ನು 2ವರೆ ವರ್ಷ ಡಿಕೆಶಿಯವರನ್ನ ಸಿಎಂ ಮಾಡಲು ನಿರ್ಧಾರ ಮಾಡಲಾಗಿದೆ.
ಕನ್ನಡಿಗರ ಹಿತ ರಕ್ಷಣೆಗೆ ನಮ್ಮ ಕೈಗಳು ಸದಾ ಒಂದಾಗಿರಲಿದೆ.
ಜನಪರ, ಪಾರದರ್ಶಕ, ಭ್ರಷ್ಟಾಚಾರ ರಹಿತ ಆಡಳಿತ ನೀಡುವ ಜೊತೆಗೆ ನಮ್ಮ ಎಲ್ಲಾ ಗ್ಯಾರೆಂಟಿಗಳನ್ನು ಈಡೇರಿಸಲು ಕಾಂಗ್ರೆಸ್ ಪಕ್ಷ ಒಂದು ಕುಟುಂಬವಾಗಿ ಕೆಲಸ ಮಾಡಲಿದೆ. pic.twitter.com/V0OoO7JUKQ
— Siddaramaiah (@siddaramaiah) May 18, 2023
ಸಿದ್ದರಾಮಯ್ಯ ಸಿಎಂ ಆಗಿದ್ದಕ್ಕೆ, ಕಾಯಿ ಒಡೆದು ಹರಕೆ ಸಲ್ಲಿಕೆ: ಕೊಟ್ಟೂರು ಮಂಜುನಾಥ್‌ಗೆ ಸಚಿವ ಸ್ಥಾನ ನೀಡಲು ಆಗ್ರಹ
‘ಮೊದಲ ಆದ್ಯತೆ ದೇವೇಗೌಡರಿಗೆ. ಅವರ ಹುಟ್ಟುಹಬ್ಬಕ್ಕೆ ಸ್ವರೂಪ್ ಗೆಲುವೇ ಉಡುಗೊರೆ ‘
ಹೆಚ್.ಡಿ.ದೇವೇಗೌಡರ ಹುಟ್ಟುಹಬ್ಬದ ಪ್ರಯುಕ್ತ ದೇವಾಲಯದಲ್ಲಿ ಪೂಜೆ ಸಲ್ಲಿಸಿದ ಸ್ವರೂಪ್..