ಸಿಎಂ ಬಸವರಾಜ್ ಬೊಮ್ಮಾಯಿ ಪರ, ಶಿಗ್ಗಾವಿಗೆ ಬಂದು, ಕೇಂದ್ರ ಸಚಿವ ಜಗತ್ ಪ್ರಕಾಶ್ ನಡ್ಡಾ ಪ್ರಚಾರ ನಡೆಸಿದ್ದರು. ಈ ವೇಳೆ ಅವರು ಭಾಷಣ ಮಾಡುವಾಗ, ರಾಜ್ಯವು ಪ್ರಧಾನಿ ನರೇಂದ್ರ ಮೋದಿಯವರ ಆಶೀರ್ವಾದದಿಂದ ವಂಚಿತರಾಗಬಾರದು ಎಂದು ಹೇಳಿದ್ದರು. ಈ ವಿಷಯ ಕುರಿತಂತೆ ಮಾಜಿ ಸಿಎಂ ಸಿದ್ದರಾಮಯ್ಯ, ಟ್ವೀಟ್ ಮೇಲೆ ಟ್ವೀಟ್ ಮಾಡಿ, ಪ್ರಶ್ನೆಗಳ ಸುರಿಮಳೆ ಸುರಿಸಿದ್ದಾರೆ.
ಪ್ರಜಾಪ್ರಭುತ್ವದಲ್ಲಿ ಜನರೇ ಜನಾರ್ಧನರು, ಆಶೀರ್ವಾದ ನೀಡಲು ಪ್ರಧಾನಿ ಮೋದಿ ಅವರು ದೇವರಲ್ಲ, ಜನರ ಸೇವೆ ಮಾಡಲು ಜನರಿಂದ ಆಯ್ಕೆಯಾಗಿರುವ ಪ್ರತಿನಿಧಿ ಎನ್ನುವುದು ನೆನಪಿರಲಿ ನಡ್ಡಾ ಅವರೇ ಎಂದು ತಿರುಗೇಟು ಕೊಟ್ಟಿದ್ದಾರೆ.
ಮಹದಾಹಿ ಯೋಜನೆಗೆ ತಾತ್ವಿಕ ಒಪ್ಪಿಗೆ ನೀಡಲು ವಿಳಂಬ ಮಾಡಿದ್ದು, ಮೇಕೆದಾಟು ಯೋಜನೆಗೆ ಅನುಮತಿ ನೀಡಲು ವಿಫಲವಾಗಿದ್ದು, ಕೇಂದ್ರ ಸರ್ಕಾರದ ನೆರವಿನ ಕೊರತೆಯಿಂದ ಎತ್ತಿನಹೊಳೆ ಯೋಜನೆ ಕುಂಟುತ್ತಾ ಸಾಗಿರುವುದು ಪ್ರಧಾನಿ ಮೋದಿ ಆಶೀರ್ವಾದವೇ? ಶಾಪವೇ ನಡ್ಡಾ ಅವರೇ..? ಎಂದು ಸಿದ್ದರಾಮಯ್ಯ ಟ್ವೀಟ ಮೂಲಕ ಪ್ರಶ್ನಿಸಿದ್ದಾರೆ.
ರಾಜ್ಯ ಬಿಜೆಪಿ ಸರ್ಕಾರದ ನಾಯಕರು 40% ಕಮಿಷನ್ ಮೂಲಕ ಕಳೆದ ನಾಲ್ಕು ವರ್ಷಗಳಲ್ಲಿ ಅಂದಾಜು ಒಂದುವರೆ ಲಕ್ಷ ಕೋಟಿ ರೂಪಾಯಿಗಳನ್ನು ನುಂಗಿ ಹಾಕಿರುವುದು ಮೋದಿಯವರ ಆಶೀರ್ವಾದವೇ? ಶಾಪವೇ ? ನಡ್ಡಾ ಅವರೇ..? ಎಂದು ಮೇಲಿಂದ ಮೇಲೆ ಟ್ವೀಟ್ ಮಾಡಿ, ನಡ್ಡಾಗೆ ಕುಟುಕಿದ್ದಾರೆ. ಅಲ್ಲದೇ, ಹ್ಯಾಶ್ಟ್ಯಾಗ್ ಆನ್ಸರ್ ಮಾಡಿ ನಡ್ಡಾ ಎಂಬ ಅಭಿಯಾನವನ್ನೂ ಆರಂಭಿಸಿದ್ದಾರೆ.
ಮಾಜಿ ಸಿಎಂ ಸಿದ್ದರಾಮಯ್ಯ ಇನ್ನೂ ಏನೇನು ಟ್ವೀಟ್ ಮಾಡಿದ್ದಾರೆ ಅನ್ನೋ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ..
ರಾಜ್ಯ @BJP4Karnataka ನಾಯಕರು 40% ಕಮಿಷನ್ ಮೂಲಕ ಕಳೆದ ನಾಲ್ಕು ವರ್ಷಗಳಲ್ಲಿ ಅಂದಾಜು ಒಂದುವರೆ ಲಕ್ಷ ಕೋಟಿ ರೂಪಾಯಿಗಳನ್ನು ನುಂಗಿ ಹಾಕಿರುವುದು @narendramodi ಆಶೀರ್ವಾದವೇ? ಶಾಪವೇ @JPNadda?
8/8#AnswerMadiNadda— Siddaramaiah (@siddaramaiah) April 20, 2023
ಮಹದಾಹಿ ಯೋಜನೆಗೆ ತಾತ್ವಿಕ ಒಪ್ಪಿಗೆ ನೀಡಲು ವಿಳಂಬ ಮಾಡಿದ್ದು, ಮೇಕೆದಾಟು ಯೋಜನೆಗೆ ಅನುಮತಿ ನೀಡಲು ವಿಫಲವಾಗಿದ್ದು, ಕೇಂದ್ರ ಸರ್ಕಾರದ ನೆರವಿನ ಕೊರತೆಯಿಂದ ಎತ್ತಿನಹೊಳೆ ಯೋಜನೆ ಕುಂಟುತ್ತಾ ಸಾಗಿರುವುದು @narendramodi ಆಶೀರ್ವಾದವೇ? ಶಾಪವೇ @JPNadda?
7/8#AnswerMadiNadda pic.twitter.com/97w7hrtFFq— Siddaramaiah (@siddaramaiah) April 20, 2023
ಕರ್ನಾಟಕದ ಗಡಿಪ್ರದೇಶವನ್ನು ಆಕ್ರಮಿಸುವ ದುರುದ್ದೇಶದಿಂದ ಮಹಾರಾಷ್ಟ್ರದ ಬಿಜೆಪಿ ಬೆಂಬಲಿತ ಸರ್ಕಾರ ಅಲ್ಲಿನ 865 ಹಳ್ಳಿಗಳಲ್ಲಿ ಆರೋಗ್ಯ ಯೋಜನೆಯನ್ನು ಜಾರಿಗೊಳಿಸಲು ಹೊರಟಿರುವುದು @narendramodi ಆಶೀರ್ವಾದವೇ? ಶಾಪವೇ @JPNadda?
6/8#AnswerMadiNadda— Siddaramaiah (@siddaramaiah) April 20, 2023
ಐಬಿಪಿಎಸ್ ಮತ್ತು ಎಲ್ಐಸಿ ಪರೀಕ್ಷೆಗಳನ್ನು ಕನ್ನಡದಲ್ಲಿ ಬರೆಯಲಿಕ್ಕೆ ಅವಕಾಶ ನೀಡದೆ ಹಿಂದಿ ಮತ್ತು ಇಂಗ್ಲೀಷ್ ನಲ್ಲಿ ಬರೆಯುವುದನ್ನು ಕಡ್ಡಾಯಗೊಳಿಸಿ ಕನ್ನಡಿಗ ಯುವಜನರ ಹೊಟ್ಟೆಗೆ ಹೊಡೆದದ್ದು @narendramodi ಆಶೀರ್ವಾದವೇ? ಶಾಪವೇ @JPNadda?
5/8#AnswerMadiNadda— Siddaramaiah (@siddaramaiah) April 20, 2023
ಕನ್ನಡಿಗರು ಕಟ್ಟಿರುವ ಸ್ಟೇಟ್ ಬ್ಯಾಂಕ್ ಆಫ್ ಮೈಸೂರು, ಸಿಂಡಿಕೇಟ್ ಬ್ಯಾಂಕ್, ಕಾರ್ಪೋರೇಷನ್ ಬ್ಯಾಂಕ್ ಮತ್ತು ವಿಜಯಬ್ಯಾಂಕ್ ಗಳನ್ನು ನುಂಗಿ ಹಾಕಿದ್ದು,
ಕನ್ನಡಿಗರ ಹೆಮ್ಮೆಯ ‘ನಂದಿನಿ’ಯನ್ನು ಗುಜರಾತ್ ಮೂಲದ ‘ಅಮುಲ್’ ಆಪೋಶನ ತೆಗೆದುಕೊಳ್ಳಲು ಹೊರಟಿರುವುದು @narendramodi ಆಶೀರ್ವಾದವೇ? ಶಾಪವೇ @JPNadda?
4/8#AnswerMadiNadda— Siddaramaiah (@siddaramaiah) April 20, 2023
2019ರಲ್ಲಿ ನೆರೆ ಹಾವಳಿ ನಷ್ಟಕ್ಕೆ ರೂ.35,000 ಕೋಟಿ ಪರಿಹಾರ ಕೇಳಿದ್ದರೂ, ಕೇವಲ ರೂ.1,869 ಕೋಟಿ ಮಾತ್ರ ಕೇಂದ್ರ @BJP4India ಸರ್ಕಾರ ಕೊಟ್ಟಿದ್ದು,
2020 ಮತ್ತು 2021ರಲ್ಲಿಯೂ ಇದೇ ಅನ್ಯಾಯ ಮುಂದುವರಿಸಿದ್ದು @narendramodi ಆಶೀರ್ವಾದವೇ? ಶಾಪವೇ @JPNadda?
3/8#AnswerMadiNadda pic.twitter.com/oqip55FdzB— Siddaramaiah (@siddaramaiah) April 20, 2023
ಕೇಂದ್ರ @BJP4India ಸರ್ಕಾರದ ಅನುದಾನ ಕಡಿತದಿಂದಾಗಿ ರಾಜ್ಯ @BJP4Karnataka ಸರ್ಕಾರ ಮಾಡಿಕೊಂಡ ಸಾಲ ರೂ.2.40 ಲಕ್ಷ ಕೋಟಿಗಳಿಂದ ರೂ.5.60 ಲಕ್ಷ ಕೋಟಿಗೆ ಏರಿಕೆಯಾಗಿದ್ದು ಮತ್ತು
ಪ್ರತಿಯೊಬ್ಬ ಕನ್ನಡಿಗನ ತಲೆಮೇಲೆ ರೂ.86,000 ಸಾಲದ ಹೊರೆ ಬಿದ್ದಿರುವುದು @narendramodi ಅವರ ಆಶೀರ್ವಾದವೇ? ಶಾಪವೇ @JPNadda?
2/8#AnswerMadiNadda— Siddaramaiah (@siddaramaiah) April 20, 2023
ಮಾನ್ಯ @JPNadda ಅವರೇ,
ತೆರಿಗೆ ಹಂಚಿಕೆಯ ತಾರತಮ್ಯ ನೀತಿಯಲ್ಲಿ ಕರ್ನಾಟಕ ಅಂದಾಜು ಒಂದು ಲಕ್ಷ ಕೋಟಿ ರೂಪಾಯಿ ಕಳೆದುಕೊಂಡದ್ದು,
ಕನ್ನಡಿಗರು ಕೇಂದ್ರಕ್ಕೆ ನೀಡುವ ಪ್ರತಿ ಒಂದು ರೂಪಾಯಿ ತೆರಿಗೆಯಲ್ಲಿ ಹದಿನೈದು ಪೈಸೆ ಮಾತ್ರ ವಾಪಸು ನೀಡುವುದು,@narendramodi ಅವರ ಆಶೀರ್ವಾದವೇ? ಶಾಪವೇ?
1/8#AnswerMadiNadda pic.twitter.com/pljDLGDWMl— Siddaramaiah (@siddaramaiah) April 20, 2023
ಒಕ್ಕೂಟ ವ್ಯವಸ್ಥೆಯಲ್ಲಿ ರಾಜ್ಯಗಳು ಸಂವಿಧಾನದತ್ತವಾದ ಸಮಾನ ಸ್ಥಾನಮಾನ, ಗೌರವ ಮತ್ತು ಹಕ್ಕುಗಳನ್ನು ಹೊಂದಿರುತ್ತವೆ ಎಂಬುದು ನೆನಪಿರಲಿ.
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಿಮ್ಮ ಸರ್ವಾಧಿಕಾರಿ ಧೋರಣೆಗೆ ಅವಕಾಶ ಇಲ್ಲ @JPNadda ಅವರೇ. 3/3 pic.twitter.com/2pfkvHXka6
— Siddaramaiah (@siddaramaiah) April 19, 2023
ಕರ್ನಾಟಕದ ಜನತೆ @narendramodi ಅವರ ಆಶೀರ್ವಾದದಿಂದ ವಂಚಿತರಾಗಬಾರದು ಎನ್ನುವ ನಿಮ್ಮ ಹೇಳಿಕೆ ಬೆದರಿಕೆ ಎಂದಾದರೆ ಅದಕ್ಕೆ ನನ್ನ ಧಿಕ್ಕಾರ ಇದೆ. ಇದು ನಿಮ್ಮ ಅಜ್ಞಾನ ಎಂದಾದರೆ ನಿಮಗೆ ದೇವರು ಸದ್ಬುದ್ಧಿಯ ಆಶೀರ್ವಾದವನ್ನು ಮಾಡಲಿ ಎಂದು ಹಾರೈಸುತ್ತೇನೆ @JPNadda.
2/3 pic.twitter.com/txCmf39aTr— Siddaramaiah (@siddaramaiah) April 19, 2023
ಪ್ರಜಾಪ್ರಭುತ್ವದಲ್ಲಿ ಜನರೇ ಜನಾರ್ಧನರು, ಆಶೀರ್ವಾದ ನೀಡಲು @narendramodi ಅವರು ದೇವರಲ್ಲ,
ಜನರ ಸೇವೆ ಮಾಡಲು ಜನರಿಂದ ಆಯ್ಕೆಯಾಗಿರುವ ಪ್ರತಿನಿಧಿ ಎನ್ನುವುದು ನೆನಪಿರಲಿ @JPNadda ಅವರೇ. 1/3 pic.twitter.com/QmFcfWEnCh— Siddaramaiah (@siddaramaiah) April 19, 2023
‘ಹಾಸನದ 7 ವಿಧಾನಸಭೆ ಕ್ಷೇತ್ರದಲ್ಲಿ ಜಯಗಳಿಸಿ ದೇವೇಗೌಡರ ಹುಟ್ಟುಹಬ್ಬದ ಕೊಡುಗೆ ಕೊಡುತ್ತೆವೆ’