ಬೆಂಗಳೂರು: ಪ್ರಧಾನಿ ಮೋದಿ ಇಂದು ಬೆಂಗಳೂರಿಗೆ ಆಗಮಿಸಿದ ಹಿನ್ನೆಲೆ, ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಟ್ವೀಟ್ ಮೂಲಕ ಪ್ರಶ್ನೆಗಳನ್ನು ಕೇಳಿದ್ದಾರೆ. #AnswerMadiModi ಎಂದು ಹ್ಯಾಷ್ ಟ್ಯಾಗ್ ಹಾಕಿ ಪ್ರಶ್ನೆಗಳನ್ನು ಕೇಳಿದ್ದಾರೆ. ರಾಜ್ಯದ ಹಣದುಬ್ಬರ ಶೇ.62ಕ್ಕೆ ಏರಿಕೆಯಾಗಿದೆ. ಗಾಯದ ಮೇಲೆ ಬರೆ ಎಂಬಂತೆ ರಾಜ್ಯದ ನಿರುದ್ಯೋಗ ಪ್ರಮಾಣ ಶೇ.38.7ಕ್ಕೆ ಏರಿಕೆಯಾಗಿದೆ. ಹೀಗಾದರೆ ಸಾಮಾನ್ಯ ಜನ ಬದುಕುವುದು ಹೇಗೆ?
ನಾಡಪ್ರಭು ಕೆಂಪೇಗೌಡರ ಬೃಹತ್ ಕಂಚಿನ ಪ್ರತಿಮೆ ಲೋಕಾರ್ಪಣೆ ಮಾಡಿದ ಪ್ರಧಾನಿ
ತುಮಕೂರು-ದಾವಣಗೆರೆ, ಬೆಂಗಳೂರು ಸಬ್ ಅರ್ಬನ್ ರೈಲ್ವೆ ಯೋಜನೆಗಳಿಗೆ ಅಗತ್ಯ ಹಣ ನೀಡಿಲ್ಲ ರಾಯಚೂರಿನ ಜನತೆಯ ಏಮ್ಸ್ ಕನಸು ಇನ್ನೂ ಕನಸಾಗಿಯೇ ಉಳಿದಿದೆ. ಕರ್ನಾಟಕದ ಬಗ್ಗೆ ಯಾಕೇ ಈ ಮಲತಾಯಿ ಧೋರಣೆ? ಎಂದು ಅನೇಕ ಸರಣಿ ಪ್ರಶ್ನೆಗಳನ್ನು ಕೇಳಿ ಉತ್ತರಿಸಿ ಮೋದಿ ಎಂದು ಸಿದ್ದರಾಮಯ್ಯ ಟ್ವೀಟ್ ನಲ್ಲಿ ಬರೆದುಕೊಂಡಿದ್ದಾರೆ.
ಹೊಸದಾಗಿ ನಿರ್ಮಾಣವಾಗಿರುವ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 2 ಉದ್ಘಾಟಿಸಿದ ಪ್ರಧಾನಿ ಮೋದಿ