ಕರ್ನಾಟಕ ಟಿವಿ : ಸಿಎಂ ಯಡಿಯೂರಪ್ಪ ವಿರುದ್ಧ ಮಾಜಿ ಸಿಎಂ ಸಿದ್ದರಾಮಯ್ಯ ಸರಣಿ ಟ್ವೀಟ್ ಮೂಲಕ ವ್ಯಂಗ್ಯವಾಡಿದ್ದಾರೆ.
ಮುಖ್ಯಮಂತ್ರಿ ಯಡಿಯೂರಪ್ಪ ರವರು ಅನುಭವಿಸುತ್ತಿರುವ ಅವಮಾನ, ಅನ್ಯಾಯ, ಅಸಂತೋಷವನ್ನು ನೋಡುತ್ತಿದ್ದರೆ ಅನುಕಂಪ ಹುಟ್ಟುತ್ತೆ. ಅವರ ರಾಜಕೀಯ ಎದುರಾಳಿಯಾದ ನನ್ನಂಥವನಲ್ಲಿಯೂ ಅನುಕಂಪ ಮೂಡುವಂತಾಗಿದೆ. ಸನ್ಮಾನ್ಯ ಮುಖ್ಯಮಂತ್ರಿಗಳಾದ ಯಡಿಯೂರಪ್ಪ ಅವರೇ. ನೀವು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲು 3 ದಿನ, ಸಂಪುಟ ರಚನೆಗೆ 26 ದಿನ,
ಮತ್ತು ಖಾತೆ ಹಂಚಿಕೆಗೆ 6 ದಿನ ತಗೆದುಕೊಂಡ್ರಿ. ಈಗ ಭಿನ್ನಮತ ಶಮನಕ್ಕೆ ಇನ್ನೆಷ್ಟು ದಿನ ಬೇಕು? ಈ ಎಲ್ಲದರ ನಡುವೆ ನಿಮ್ಮ ಸರ್ಕಾರ ಟೇಕ್ ಆಫ್ ಆಗುವುದು ಯಾವಾಗ? ರಾಜ್ಯದ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ, ಸಂಪುಟ ರಚನೆ, ಖಾತೆ ಹಂಚಿಕೆಯ ಕಸರತ್ತುಗಳನ್ನು ಗಮನಿಸಿದರೆ ಜನಪ್ರತಿನಿಧಿಗಳ ದನಿ ಉಡುಗಿಹೋಗಿದೆ. ಸಂವಿಧಾನೇತರ ಶಕ್ತಿಗಳೇ ವಿಜೃಂಭಿಸಿರುತ್ತಿರುವ ಹಾಗೆ ಕಾಣಿಸುತ್ತಿದೆ. ಇದು ಪ್ರಜಾಪ್ರಭುತ್ವದ ಆರೋಗ್ಯಕ್ಕೆ ಮಾರಕ” ಅಂತ ಟ್ವೀಟರ್ ನಲ್ಲಿ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ.