ನಾನು ಸ್ವಾಮೀಜಿಗಳಿಗೆ ಅವಮಾನ ಮಾಡಿಲ್ಲ – ಮಾಜಿ ಸಿಎಂ ಸಿದ್ಧರಾಮಯ್ಯ

ಬೆಂಗಳೂರು: ನಮ್ಮ ತಾಯಂದಿರು ಸೇರಿದಂತೆ ಸಾಮಾನ್ಯವಾಗಿ ಎಲ್ಲರೂ ತಲೆಮೇಲೆ ಬಟ್ಟೆ ಹಾಕಿಕೊಳ್ಳುತ್ತಾರೆ ಎಂದು ಹೇಳಿದ್ದೆನೆಯೇ ಹೊರತು ಸ್ವಾಮೀಜಿಗಳಿಗೆ ಅವಮಾನ ಮಾಡಿಲ್ಲ, ಅಗೌರವ ತೋರಿಲ್ಲ. ಅನಗತ್ಯವಾಗಿ ನನ್ನ ಹೇಳಿಕೆಯನ್ನು ತಿರುಚಲಾಗಿದೆ ಎಂಬುದಾಗಿ ವಿಪಕ್ಷ ನಾಯಕ ಹಾಗೂ ಮಾಜಿ ಸಿಎಂ ಸಿದ್ಧರಾಮಯ್ಯ ಸ್ಪಷ್ಟ ಪಡಿಸಿದ್ದಾರೆ.

ಈ ಬಗ್ಗೆ ಟ್ವಿಟ್ ಮಾಡಿರುವಂತ ಅವರು, ಸರ್ವ ಜಾತಿಗಳ ಸ್ವಾಮೀಜಿಗಳ ಬಗ್ಗೆ ನನಗೆ ಗೌರವವಿದೆ, ದೀರ್ಘಕಾಲದಿಂದ ನನಗೆ ಅವರ ಜೊತೆ ಹಾರ್ದಿಕ ಸಂಬಂಧ ಇದೆ. ಯಾವ ಸ್ವಾಮೀಜಿಗಳ ಬಗ್ಗೆಯೂ, ಯಾವಾಗಲೂ ನಾನು ಅಗೌರವದಿಂದ ನಡೆದುಕೊಂಡಿಲ್ಲ‌ ಎನ್ನುವುದು ರಾಜ್ಯದ ಜನತೆಗೆ ಗೊತ್ತಿದೆ ಎಂದಿದ್ದಾರೆ.

ರಾಜಕೀಯ ವಿರೋಧಿಗಳು ದುರುದ್ದೇಶದಿಂದ ನನ್ನ ಹೇಳಿಕೆಯನ್ನು ತಿರುಚಿ ಅಪಪ್ರಚಾರ ಮಾಡುತ್ತಿದ್ದಾರೆ. ಇದಕ್ಕೆ ಕೆಲವು ಮಾಧ್ಯಮಗಳು‌ ಕೂಡಾ ಸಾಥ್ ನೀಡಿರುವುದು‌ ವಿಷಾದನೀಯ ಬೆಳವಣಿಗೆ ಎಂದು ತಿಳಿಸಿದ್ದಾರೆ.

ನನ್ನ ಹೇಳಿಕೆಯನ್ನು ತಿರುಚಿರುವುದು ರಾಜ್ಯದ ಪ್ರಮುಖ ಮಠಗಳ ಹಿರಿಯ ಸ್ವಾಮೀಜಿಗಳಿಗೆ ಅರ್ಥವಾಗಿರುವ ಕಾರಣಕ್ಕಾಗಿಯೇ ಅವರು ಮೌನವಾಗಿದ್ದಾರೆ. ಅವರೆಲ್ಲರಿಗೂ ನನ್ನ ಕೃತಜ್ಞತಾಪೂರ್ವಕ ನಮನಗಳು ಎಂದಿದ್ದಾರೆ.

About The Author