ಬೆಂಗಳೂರು: ಅವಕಾಶ ವಂಚಿತ ಸಮುದಾಯಗಳ ಹಿತರಕ್ಷಣೆ ಹಾಗೂ ಅವರ ಅಭ್ಯುದಯ ನಮ್ಮ ಕಾಳಜಿಯಾಗಿದೆ. ಹಿಂದುಳಿದ ವರ್ಗದವರು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದವರು, ಅಲ್ಪಸಂಖ್ಯಾತರು, ಮಹಿಳೆಯರು, ಕಾರ್ಮಿಕರು, ರೈತರು ಹಾಗೂ ಇತರ ಶೋಷಿತ ವರ್ಗದವರ ಶ್ರೇಯೋಭಿವೃದ್ಧಿಗೆ ನಮ್ಮ ಸರ್ಕಾರ ಆದ್ಯತೆ ನೀಡುತ್ತದೆ. ಈ ನಿಟ್ಟಿನಲ್ಲಿ ನಮ್ಮ ಸರ್ಕಾರವು ಪಿಟಿಸಿಎಲ್ ಕಾಯ್ದೆಗೆ ತಿದ್ದುಪಡಿ ಮಾಡುವ ಮೂಲಕ ಪರಿಶಿಷ್ಟ ಜಾತಿ, ಪಂಗಡದವರಿಗೆ ಹಂಚಿಕೆಯಾದ ಭೂಮಿಯ ಅಕ್ರಮ ಪರಭಾರೆ ವಿರುದ್ಧ ದೂರು ನೀಡಲು ಯಾವುದೇ ಕಾಲಮಿತಿ ಇಲ್ಲ ಎಂಬುದನ್ನು ನಿಚ್ಚಳಗೊಳಿಸಿದೆ.
ಅನುಸೂಚಿತ ಜಾತಿ, ಅನುಸೂಚಿತ ಪಂಗಡಗಳ ವಿಶೇಷ ಯೋಜನೆ ಕಾಯ್ದೆ 2013ರ ಸೆಕ್ಷನ್ 7(ಡಿ) ಯನ್ನು ರದ್ದುಪಡಿಸುವ ಮೂಲಕ ಡೀಮ್ಡ್ ವೆಚ್ಚದ ಹೆಸರಲ್ಲಿ ಈ ಸಮುದಾಯಗಳಿಗೆ ಮೀಸಲಿರುವ ಅನುದಾನ ಇತರೆ ಕಾರ್ಯಗಳಿಗೆ ದುರ್ಬಳಕೆಯಾಗುವುದನ್ನು ತಡೆಗಟ್ಟಲು ಕ್ರಮ ಕೈಗೊಳ್ಳಲಾಗುತ್ತಿದೆ.
ಆಸಿಡ್ ದಾಳಿ ಸಂತ್ರಸ್ತ ಮಹಿಳೆಯರಿಗೆ ಸ್ವಯಂ ಉದ್ಯೋಗ ಕೈಗೊಳ್ಳಲು ಸಾಲ ಸೌಲಭ್ಯ ಹಾಗೂ ರಾಜೀವ್ ಗಾಂಧಿ ವಸತಿ ನಿಗಮದ ಯೋಜನೆಗಳಡಿ ವಸತಿ ಸೌಲಭ್ಯ ಕಲ್ಪಿಸಲು ಕ್ರಮ ವಹಿಸಲಾಗುತ್ತಿದೆ.
‘ಸ್ವಾವಲಂಬಿ ಸಾರಥಿʼ ಯೋಜನೆಯಡಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗಗಳು ಹಾಗೂ ಅಲ್ಪಸಂಖ್ಯಾತ ಸಮುದಾಯದ ನಿರುದ್ಯೋಗಿ ಯುವಜನರಿಗೆ ವಿದ್ಯುತ್ ಚಾಲಿತ ವಾಹನಗಳ ಖರೀದಿಗೆ ಸಾಲ-ಸಹಾಯಧನ ಸೌಲಭ್ಯ ನೀಡಲಾಗುವುದು.
ದಮನಿತ ವರ್ಗಗಳಿಗೆ ಚೈತನ್ಯ ತುಂಬುವ ಉದ್ದೇಶದಿಂದ ಪರಿಶಿಷ್ಟ ಜಾತಿ/ ಪಂಗಡಗಳ ಜನರಿಗೆ ನೀಡುತ್ತಿದ್ದ ಗುತ್ತಿಗೆ ಮೊತ್ತದ ಮಿತಿಯನ್ನು 50 ಲಕ್ಷ ರೂ.ಗಳಿಂದ 1 ಕೋಟಿ ರೂ.ಗಳಿಗೆ ಏರಿಸಲಾಗಿದೆ. ಹಿಂದುಳಿದ ವರ್ಗಗಳ ಪ್ರವರ್ಗ-1 ಮತ್ತು ಪ್ರವರ್ಗ-2ಎ ನಲ್ಲಿ ಬರುವ ಸಮುದಾಯದ ಗುತ್ತಿಗೆದಾರರಿಗೆ ಒಂದು ಕೋಟಿ ರೂ.ವರೆಗಿನ ಸಿವಿಲ್ ಕಾಮಗಾರಿಗಳಲ್ಲಿ ಮೀಸಲಾತಿ ಸೌಲಭ್ಯ ಒದಗಿಸಲಾಗುವುದು.
ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರಗಳಲ್ಲಿ ಮೂಲಸೌಕರ್ಯ ಅಭಿವೃದ್ಧಿಗೆ ನಮ್ಮ ಸರ್ಕಾರ ಆದ್ಯತೆ ನೀಡಿದೆ. ಶಾಲಾ ಕೊಠಡಿಗಳ ನಿರ್ಮಾಣ, ದುರಸ್ತಿಗೆ 650 ಕೋಟಿ ರೂ. ಹಾಗೂ ಶಾಲೆ, ಕಾಲೇಜುಗಳಲ್ಲಿ ಶೌಚಾಲಯ ನಿರ್ಮಾಣವನ್ನು ಕೈಗೊಳ್ಳಲು 200 ಕೋಟಿ ರೂ. ಒದಗಿಸಲಾಗಿದೆ. ಶಾಲೆಗಳಲ್ಲಿ ಕಲಿಯುತ್ತಿರುವ ಮಕ್ಕಳಿಗೆ ವಾರಕ್ಕೆ ಎರಡು ದಿನ ಮೊಟ್ಟೆ ಕೊಡಲು ತೀರ್ಮಾನಿಸಿದ್ದೇವೆ.
Siddaramaiah: ಬ್ರಿಟಿಷರು ಕೈಗಳಿಗೆ ನಿರುದ್ಯೋಗವನ್ನು, ಹೊಟ್ಟೆಗೆ ಹಸಿವನ್ನು ಬಳುವಳಿಯಾಗಿ ಬಿಟ್ಟು ಹೋಗಿದ್ದಾರೆ..!
Siddaramaiah: ಯಾವುದೇ ಮಧ್ಯವರ್ತಿಗಳ ಕಾಟವಿಲ್ಲದೆ ಸವಲತ್ತುಗಳು ನೇರವಾಗಿ ತಲುಪಲಿವೆ.
Independence Day: ನಾಡಿನ ಸಮಸ್ತ ಜನತೆಗೆ ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯಗಳು