Thursday, August 7, 2025

Latest Posts

Siddaramaiah : ಪೊಲೀಸ್ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ ಸಿಎಂ ಸಿದ್ದರಾಮಯ್ಯ

- Advertisement -

Banglore News : ಆಯಾ ಠಾಣಾ ವ್ಯಾಪ್ತಿಗಳಲ್ಲಿ ಅಕ್ರಮ ಚಟುವಟಿಕೆಗಳು, ಕಾನೂನು ಬಾಹಿರ ಸಂಘಟಿತ ಅಪರಾಧಗಳು ನಡೆಯುತ್ತಿದ್ದರೆ ಡಿಸಿಪಿ, ಎಸ್ ಪಿ ಮಟ್ಟದ ಅಧಿಕಾರಿಗಳನ್ನೂ ಹೊಣೆ ಮಾಡಿ ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಸಿದರು.

ಕರ್ನಾಟಕ ಪೊಲೀಸ್ ವರಿಷ್ಠಾಧಿಕಾರಿಗಳ ವಾರ್ಷಿಕ ಸಮ್ಮೇಳನದಲ್ಲಿ ಭಾಗವಹಿಸಿ ಮಾತನಾಡಿದ ಅವರು,ನಮ್ಮ ಸರ್ಕಾರ ಕೇವಲ‌ ಕೆಳ ಹಂತದ ಅಧಿಕಾರಿಗಳು, ಸಿಬ್ಬಂದಿ ವಿರುದ್ಧ ಕ್ರಮ ಕೈಗೊಂಡು ಕೈ ತೊಳೆದುಕೊಳ್ಳುವುದಿಲ್ಲ, ಹಿರಿಯ ಅಧಿಕಾರಿಗಳ ಮೇಲೂ ಕ್ರಮ ಕೈಗೊಳ್ಳುತ್ತೇವೆ ಎಂದು ಎಚ್ಚರಿಸಿದರು.

ಸುಳ್ಳು ಸುದ್ದಿ, ವದಂತಿಗಳ ಮೂಲಕ ಸಮಾಜದ ಶಾಂತಿ ಕದಡುವವರ ವಿರುದ್ಧ ಸ್ವಯಂಪ್ರೇರಿತ ಎಫ್ ಐ ಆರ್ ದಾಖಲಿಸಿಕೊಂಡು ಕ್ರಮ ಕೈಗೊಳ್ಳಬೇಕು. ಸೂಕ್ಷ್ಮ ಪ್ರಕರಣಗಳಲ್ಲಿ ದೂರು ಕೊಡುವವರು ಬರಲಿ ಎಂದು ಕಾಯುತ್ತಾ ಕೂರಬಾರದು ಎನ್ನುವ ಎಚ್ಚರಿಕೆ ನೀಡಲಾಗಿದೆ ಎಂದು ತಿಳಿಸಿದರು.

ಸಿಸಿಬಿ ಯನ್ನು ಇನ್ನಷ್ಟು ಸದೃಢಗೊಳಿಸಲು 230 ಸಿಬ್ಬಂದಿಯನ್ನು ಹೊಸದಾಗಿ ನೇಮಿಸಿಕೊಳ್ಳಲು ಒಪ್ಪಿಗೆ ನೀಡಲಾಗಿದೆ. ಸಿಬ್ಬಂದಿಗೆ ಅಗತ್ಯವಾದರೆ ಹೊಸ ಕಟ್ಟಡಗಳನ್ನು ಒದಗಿಸಲಾಗುವುದು.ಹಿರಿಯ ಅಧಿಕಾರಿಗಳು ಜನ ಸಂಪರ್ಕಕ್ಕೆ ಸಿಗದೇ ಹೋದರೆ , ಜನ ಸ್ನೇಹಿ ಆಗದೇ ಹೋದರೆ ಅಂತಹ ಅಧಿಕಾರಿಗಳ ವಿರುದ್ದ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.

Edga Ground : ಗಣೇಶ ಪ್ರತಿಷ್ಠಾಪನೆಗೆ ಅನುಮತಿಗೆ ಆಯುಕ್ತರ ವಿಳಂಬ : ಬೀದಿಗಿಳಿದ ಪ್ರತಿಭಟನಾಕಾರರು

Ganesha Fest : ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಕೂಡುವ ಧಾರವಾಡ ಗಣಪ ಇದುವೆ ನೋಡಿ…!

Rain : ಕರಾವಳಿಯಲ್ಲಿ ಮಳೆ ಮುನ್ಸೂಚನೆ : ಎಲ್ಲೋ ಅಲರ್ಟ್ ಘೋಷಣೆ

- Advertisement -

Latest Posts

Don't Miss