ಸಿದ್ದು ಡಿಕೆಶಿ ಜಗಳ ಖರ್ಗೆಗೆ ಲಾಭ : ಡಿಕೆಶಿಗೆ ದೇವರೇ ಗತಿ!

ರಾಜ್ಯ ರಾಜಕಾರಣದಲ್ಲಿ ಚರ್ಚೆಯಲ್ಲಿರುವ ಸಿಎಂ ಬದಲಾವಣೆ ವಿಚಾರಕ್ಕೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ಹೊಸ ಟ್ವಿಸ್ಟ್‌ ಕೊಟ್ಟಿದ್ದಾರೆ. ಈ ಹಿಂದೆ ಅಧಿಕಾರ ಹಂಚಿಕೆ ವಿಚಾರವಾಗಿ ಯಾವುದೇ ಒಪ್ಪಂದವಾಗಿಲ್ಲವೆಂದು ಖುದ್ದು ಸಿ ಎಂ ಸಿದ್ದರಾಮಯ್ಯನವರೇ ಹೇಳಿದ್ದರು. ಆದರೆ ಇದೀಗ ಇದಕ್ಕೆ ಟ್ವಿಸ್ಟ್‌ ಕೊಡುವಂತೆ ವಿಧಾನಸಭೆಯ ವಿರೋಧಪಕ್ಷದ ನಾಯಕ ಆರ್‌ ಅಶೋಕ್‌ ಅವರು ಹೊಸ ಬಾಂಬ್‌ ಸಿಡಿಸಿದ್ದಾರೆ.

ಅಧಿಕಾರ ಹಂಚಿಕೆಗೆ ಸಂಬಂಧಿಸಿದಂತೆ ಸಿದ್ದರಾಮಯ್ಯ-ಡಿ.ಕೆ. ಶಿವಕುಮಾರ್ ನಡುವೆ ಒಪ್ಪಂದ ಆಗಿರುವುದು ನೂರಕ್ಕೆ ನೂರು ಸತ್ಯ. ಇವರಿಬ್ಬರ ಜಗಳದಲ್ಲಿ ಮೂರನೇಯವರಿಗೆ ಅಂದರೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಲಾಭ ಆಗಬಹುದು ಎಂದು ಹೇಳಿದ್ದಾರೆ.

ಮಲ್ಲಿಕಾರ್ಜುನ ಖರ್ಗೆ ಅವರು ಅಧಿಕಾರ ಕೈತಪ್ಪಿದ ಬಗ್ಗೆ ಹೇಳಿಕೆ ನೀಡಿರುವುದು ಸಿದ್ದರಾಮಯ್ಯ ಮೇಲಿನ ಕೋಪದಿಂದಲೇ ಹೊರತು ಬೇರೆ ಉದ್ದೇಶದಿಂದಲ್ಲ. ಈಗಲಾದರೂ ಆ ಕುರ್ಚಿ ಮೇಲೆ ಕೂರಿಸಲೆಂದೇ ಹೇಳಿದ್ದಾರೆ. ಅಕ್ಟೋಬರ್‌ನಲ್ಲಿ ಕ್ರಾಂತಿ ಆಗುತ್ತದೆ. ಡಿಕೆಶಿಗೆ ದೇವರೇ ಗತಿ ಎಂದರು.
ಡಿಕೆಶಿ ವರ ಕೊಡುವ ದೇವರನ್ನು ಹುಡುಕಿಕೊಂಡು ಹೋಗುತ್ತಿದ್ದಾರೆ. ಅವರಿಗೆ ಶಾಸಕರ ಬೆಂಬಲ ಇಲ್ಲ ಎಂದು ಮುಖ್ಯಮಂತ್ರಿ ಈಗಾಗಲೇ ಹೇಳಿಲ್ಲವೇ? ಡಿಕೆಶಿಗೆ ಕಂಟಕ ಇರುವುದು ಜೆಡಿಎಸ್‌ನಿಂದ ಬಂದವರಿಂದಲೇ ಎಂದು ಹೇಳಿದರು. ಡಿಕೆಶಿ ಮುಖ್ಯಮಂತ್ರಿ ಕುರ್ಚಿ ಎಳೆಯುತ್ತಿದ್ದಾರೆ. ಮತ್ತೊಂದೆಡೆ ಖರ್ಗೆ ಸಿಎಂ ಕುರ್ಚಿ ಬಗ್ಗೆ ಮಾತನಾಡುತ್ತಿದ್ದಾರೆ. ಮುಖ್ಯಮಂತ್ರಿ ಸ್ಥಾನ ತಪ್ಪಿದ ಬಗ್ಗೆ ಖರ್ಗೆಯವರು ಎಸ್.ಎಂ. ಕೃಷ್ಣ ಅವರು ಬದುಕಿದ್ದಾಗಲೇ ಹೇಳಬೇಕಿತ್ತು. ಈಗ ಹೇಳುವುದು ಕೃಷ್ಣ ಅವರಿಗೆ ಅವಮಾನ ಮಾಡಿದಂತೆಯೇ ಎಂದಿದ್ದಾರೆ.

 

ವರದಿ:ರಂಜಿತ ರೇವಣ್ಣ ನಾಟನಹಳ್ಳಿ

About The Author