Thursday, October 2, 2025

Latest Posts

ಸಿದ್ದರಾಮಯ್ಯ ಮೈಸೂರು ಪ್ರವಾಸ : ಏನೆಲ್ಲಾ ಕಾರ್ಯಕ್ರಮಗಳು?

- Advertisement -

ನಾಳೆ ಮೈಸೂರಿನಲ್ಲಿ ವಿಜಯದಶಮಿ ಜಂಬೂಸವಾರಿಗೆ ಕ್ಷಣಗಣನೆ ಆರಂಭವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಕ್ಟೋಬರ್ 1 ಹಾಗೂ 2 ರಂದು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ.

ಅ.1ರಂದು ಮಧ್ಯಾಹ್ನ 3.25ಕ್ಕೆ ವಿಶೇಷ ವಿಮಾನದಲ್ಲಿ ಬಂದಿಳಿದು ವಾಸ್ತವ್ಯ ಹೂಡುವರು. 2ರಂದು ಬೆಳಿಗ್ಗೆ 8.30ಕ್ಕೆ ಗಾಂಧಿ ವೃತ್ತದಲ್ಲಿ ಗಾಂಧಿ ಜಯಂತಿ ಅಂಗವಾಗಿ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡುವರು. ಬೆಳಿಗ್ಗೆ 9ಕ್ಕೆ ಚಾಮುಂಡಿಬೆಟ್ಟದ ತಪ್ಪಲಿನ ಸುತ್ತೂರು ಮಠಕ್ಕೆ ಭೇಟಿ ನೀಡುವರು. ಮಧ್ಯಾಹ್ನ 1ಕ್ಕೆ ಅರಮನೆ ಆವರಣದಲ್ಲಿರುವ ಬಲರಾಮ ದ್ವಾರದಲ್ಲಿ ನಂದಿಧ್ವಜ ಪೂಜೆಯಲ್ಲಿ ಪಾಲ್ಗೊಳ್ಳುವರು.

ಅ.2 ರಂದು ಮಧ್ಯಾಹ್ನ 1 ರಿಂದ 1.18 ರವರೆಗೆ ಸಲ್ಲುವ ಶುಭ ಧನುರ್‌ ಲಗ್ನದಲ್ಲಿ ಅರಮನೆಯ ಬಲರಾಮ ದ್ವಾರದಲ್ಲಿ ಮುಖ್ಯಮಂತ್ರಿಯವರು ನಂದಿಧ್ವಜಕ್ಕೆ ಪೂಜೆ ನೆರವೇರಿಸುವ ಮೂಲಕ ಈ ಬಾರಿಯ ಜಂಬೂಸವಾರಿಗೆ ಚಾಲನೆ ನೀಡಲಿದ್ದಾರೆ. ನಂತರ ಸಂಜೆ 4.42 ರಿಂದ 5.06 ರವರೆಗೆ ಸಲ್ಲುವ ಶುಭ ಕುಂಭ ಲಗ್ನದಲ್ಲಿ ಅರಮನೆ ಒಳಾವರಣದ ವಿಶೇಷ ವೇದಿಕೆಯಲ್ಲಿ, ಗಜರಾಜ ಅಭಿಮನ್ಯು ಹೊರಲಿರುವ 750 ಕೆಜಿ ತೂಕದ ಚಿನ್ನದ ಅಂಬಾರಿಯಲ್ಲಿರುವ ಚಾಮುಂಡೇಶ್ವರಿ ವಿಗ್ರಹಕ್ಕೆ ಪುಷ್ಪಾರ್ಚನೆ ಮಾಡಲಿದ್ದಾರೆ. ಈ ಸಂದರ್ಭದಲ್ಲಿ ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್‌, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌, ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್‌.ಸಿ. ಮಹದೇವಪ್ಪ ಮತ್ತಿತರರು ಉಪಸ್ಥಿತರಿರಲಿದ್ದಾರೆ.

ಸಂಜೆ 4.42ಕ್ಕೆ ಅರಮನೆ ಒಳಾವರಣದಲ್ಲಿ ವಿಜಯದಶಮಿ ಮೆರವಣಿಗೆಯ ಉದ್ಘಾಟನೆ ನೆರವೇರಿಸುವರು. ಸಂಜೆ 7ಕ್ಕೆ ಬನ್ನಿಮಂಟಪ ಕವಾಯಿತು ಮೈದಾನದಲ್ಲಿ ಆಯೋಜಿಸಲಾಗಿರುವ ಪಂಜಿನ ಕವಾಯತು ಕಾರ್ಯಕ್ರಮದಲ್ಲಿ ರಾಜ್ಯಪಾಲರೊಂದಿಗೆ ಭಾಗವಹಿಸುವರು.

ವರದಿ: ರಂಜಿತ ರೇವಣ್ಣ ನಾಟನಹಳ್ಳಿ

- Advertisement -

Latest Posts

Don't Miss