Friday, June 20, 2025

Latest Posts

ಸಿದ್ಧರಾಮಯ್ಯಗೆ ಫುಲ್ ಸೆಕ್ಯುರಿಟಿ ಕೊಡ್ತೀವಿ ಎಂದ ಸಿಎಂ ಬೊಮ್ಮಾಯಿ

- Advertisement -

Banglore news:

ಸಿದ್ದರಾಮಯ್ಯ ಅವರ ಕಾರಿನ ಮೇಲೆ ಮೊಟ್ಟೆ ಎಸೆದ ಘಟನೆಯನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಸೂಕ್ತ ಭದ್ರತೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಈ ವಿಚಾರವಾಗಿ ಈಗಾಗಲೇ ವಿರೋಧ ಪಕ್ಷದ ನಾಯಕರಾದ ಸಿದ್ದರಾಮುಯ್ಯ ಅವರ ಜೊತೆ ಮಾತನಾಡಿದ್ದೇನೆ. ಅವರಿಗೆ ಜೀವ ಬೆದರಿಕೆ ಇದೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ. ಈ ನಿಟ್ಟಿನಲ್ಲಿ ಈ ಘಟನೆಯನ್ನು ಗಂಭೀರವಾಗಿ ತೆಗೆದುಕೊಳ್ಳುತ್ತೇವೆ. ಸಂಪೂರ್ಣವಾಗಿ ತನಿಖೆ ಮಾಡುತ್ತೇವೆ. ಡಿಜಿ ಅವರ ಬಳಿಯೂ ಮಾತನಾಡಿದ್ದೇನೆ ಎಂದರು.

ಯಾರೂ ಸಹ ಕಾನೂನನ್ನು ಕೈಗೆತ್ತಿಕೊಳ್ಳಬಾರದು. ಆದರೆ, ಇದು ಎರಡೂ ಕಡೆಯಲ್ಲೂ ನಡೆಯುತ್ತಿದೆ. ಯಾರೂ ಮತ್ತೊಬ್ಬರನ್ನು ಕೆರಳಿಸುವ ಪ್ರಚೋದನಕಾರಿ ಹೇಳಿಕೆ ನೀಡಬಾರದು. ಈ ನಿಟ್ಟಿನಲ್ಲಿ ಕಟ್ಟುನಿಟ್ಟಾದ ಸೂಚನೆಯನ್ನು ಎಸ್‌ಪಿಗಳಿಗೂ ನೀಡಲಾಗಿದೆ ಎಂದರು.

ಮುಖ್ಯಮಂತ್ರಿಗಳೇ ನಿಮ್ಮ ಪಕ್ಷದ ಕಾರ್ಯಕರ್ತರನ್ನು ಹದ್ದುಬಸ್ತಲ್ಲಿ ಇಟ್ಟುಕೊಂಡ್ರೆ ನಿಮಗೆ ಕ್ಷೇಮ – ಡಿ.ಕೆ ಶಿವಕುಮಾರ್ ಎಚ್ಚರಿಕೆ

 

ಶಿವಮೊಗ್ಗ: ಆಗಸ್ಟ್ 23ರವರೆಗೆ ನಿಷೇಧಾಜ್ಞೆ ವಿಸ್ತರಣೆ

- Advertisement -

Latest Posts

Don't Miss