Political News:
ರಾಯಚೂರಿನ ಲಿಂಗಸುಗೂರು ತಾಲೂಕಿನ ಚಿಕ್ಕಹೊಸರೂರು ಗ್ರಾಮದ ಅಭಿಮಾನಿ ಗ್ರಾಮ ಪಂಚಾಯಿತಿ ಸದಸ್ಯ ಶರಣು ಕಡ್ಡೋಣಿ, ಸಿದ್ದರಾಮಯ್ಯ ಅವರಿಗೆ ಆಹ್ವಾನ ನೀಡಿದ್ದಾರೆ. ಸಾಮಾನ್ಯ ವರ್ಗಕ್ಕೆ ಮೀಸಲಾಗಿರುವ ಜಿಲ್ಲೆಯ ಸಿಂಧನೂರು ಮತ್ತು ರಾಯಚೂರು ನಗರದಿಂದ ಸ್ಪರ್ಧೆಗೆ ಆಹ್ವಾನ ಮಾಡಿದ್ದಾರೆ.ರಾಯಚೂರು ಜಿಲ್ಲೆ ಅಭಿವೃದ್ಧಿಯಲ್ಲಿ ಸಾಕಷ್ಟು ಹಿಂದೆ ಬಿದ್ದಿದೆ. ಹೀಗಾಗಿ ಸಿದ್ದರಾಮಯ್ಯ ಜಿಲ್ಲೆಗೆ ಬರಬೇಕು. ಸಿದ್ದರಾಮಯ್ಯ ಇಲ್ಲಿ ಸ್ರ‍್ಧಿಸಿದರೆ 50 ಸಾವಿರ ಮತಗಳ ಅಂತರದಲ್ಲಿ ಗೆಲ್ಲುತ್ತಾರೆ ಎಂದು ಅವರ ಅಭಿಮಾನಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಸಿದ್ದರಾಮಯ್ಯ ಅಭಿಮಾನಿಯ ಆಹ್ವಾನ ಈಗ ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡುತ್ತಿದೆ ಎನ್ನಲಾಗಿದೆ.ರಾಯಚೂರಿನ ಅಭಿಮಾನಿಯೊಬ್ಬರು ಸಿದ್ದರಾಮಯ್ಯ ಜಿಲ್ಲೆಗೆ ಬಂದು ಸ್ಪರ್ಧಿಸಿದರೆ ತನ್ನ 9 ಎಕರೆ ಫಲವತ್ತಾದ ಭೂಮಿಯನ್ನು ಮಾರಾಟ ಮಾಡಿ ಚುನಾವಣಾ ಖರ್ಚಿಗೆ ಹಣ ನೀಡುವುದಾಗಿ ಘೋಷಿಸಿದ್ದಾರೆ ಎಂದು ತಿಳಿದು ಬಂದಿದೆ.
ಡಿಕೆಶಿ ಹರಿದ ಚಪ್ಪಲಿ ಹಾಕಿದ್ದ.. ಲೂಟಿ, ಹಗರಣ ಮಾಡಿ ಬಂದಿದ್ದಾನೆ’: ಜಾರಕಿಹೊಳಿ