Siddaramaiah : ಗೃಹಲಕ್ಷ್ಮೀ  ಯೋಜನೆಗೆ ಸಿಎಂ ಸಿದ್ದರಾಮಯ್ಯರಿಂದ ಚಾಲನೆ

State News : ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಜುಲೈ 19 ಬುಧವಾರ ಚಾಲನೆ ನೀಡಿದರು. ವಿಧಾನಸೌಧದ ಬ್ಯಾಂಕ್ವೆಟ್‌ ಹಾಲ್‌ನಲ್ಲಿ ನಡೆದ ಸಮಾರಂಭದಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಉಪಸ್ಥಿತಿಯಲ್ಲಿ ಜಾರಿಗೊಳಿಸಲಾಯಿತು.

ಯೋಜನೆಗೆ ಅರ್ಹರಾಗಿರುವ ಮಹಿಳೆಯರು ಇಂದಿನಿಂದ ಅರ್ಜಿಗಳನ್ನು ಸಲ್ಲಿಸಲು ಪ್ರಾರಂಭಿಸಬಹುದಾಗಿದೆ ಎಂದು ಕರೆ ನೀಡಿದರು. ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯ ಗೃಹಲಕ್ಷ್ಮಿ ಆ್ಯಪ್ ಬಿಡುಗಡೆ ಮಾಡಿದ್ದಾರೆ.

ಬಡತನ ರೇಖೆಗಿಂತ ಕೆಳಗಿರುವ ಬಡತನ ರೇಖೆಗಿಂತ ಮೇಲಿರುವ ಮತ್ತು ಅಂತ್ಯೋದಯ ಕಾರ್ಡ್‌ಗಳಲ್ಲಿ ಮನೆ ಮುಖ್ಯಸ್ಥರಾಗಿ ಹೆಸರನ್ನು ನಮೂದಿಸಿರುವ ಮಹಿಳೆಯರು ಯೋಜನೆಗೆ ಅರ್ಹರಾಗಿರುತ್ತಾರೆ. ಆದಾಯ ತೆರಿಗೆ ಪಾವತಿಸುವ ಮಹಿಳೆಯರು ಮತ್ತು ಪತಿಯು ಆದಾಯ ತೆರಿಗೆ ಪಾವತಿಸುತ್ತಿದ್ದರೆ ಅಂಥವರ ಪತ್ನಿಯರು ಯೋಜನೆಗೆ ಅರ್ಹರಲ್ಲ.

Siddaramaiah : ಸಿಸಿಬಿ ಪೊಲೀಸರಿಗೆ ಅಭಿನಂದನೆ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ

Highway: ಜಮೀನಿನ ಹಣ ಕೊಡಲಿಲ್ಲವೆಂದು ಜನ್ಮ ನೀಡಿದ ತಂದೆಯನ್ನೇ ಸಾಯಿಸಿದ ಮಗ

Sudharshan Moodabidire : ಸುದರ್ಶನ್ ಮೂಡುಬಿದಿರೆ ನೇತೃತ್ವದಲ್ಲಿ ಟಿಫಿನ್ ಬೈಠಕ್

About The Author