Dehali News : ದೆಹಲಿಯಲ್ಲಿ ಕಾಂಗ್ರೆಸ್ ನಾಯಕರ ಸಭೆ ನಡೆದಿದೆ. ದೆಹಲಿಯ ಎಐಸಿಸಿ ಕಚೇರಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ರಾಜ್ಯ ನಾಯಕರ ಸಭೆ ಆರಂಭವಾಗಿದೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಸಿಎಂ ಸಿದ್ದರಾಮಯ್ಯ, ಕೆ.ಸಿ.ವೇಣುಗೋಪಾಲ್, ರಣದೀಪ್ ಸಿಂಗ್ ಸುರ್ಜೇವಾಲ, ಡಿಸಿಎಂ ಡಿ.ಕೆ.ಶಿವಕುಮಾರ್, ಸಚಿವರಾದ ಡಾ.ಜಿ.ಪರಮೇಶ್ವರ್, ಈಶ್ವರ ಖಂಡ್ರೆ, ಬಿ.ನಾಗೇಂದ್ರ, ಕೆ.ಜೆ.ಜಾರ್ಜ್, ರಾಮಲಿಂಗಾರೆಡ್ಡಿ, ಶಾಸಕರಾದ ರಾಘವೇಂದ್ರ ಹಿಟ್ನಾಳ್ ಸೇರಿದಂತೆ ಹಲವರು ಭಾಗಿಯಾಗಿದ್ದಾರೆ ಎನ್ನಲಾಗಿದೆ.
ಈ ಕಾರಣದಿಂದ ಕಾಂಗ್ರೆಸ್ ನ ಬಹುತೇಕ ನಾಯಕರು ದೆಹಲಿಗೆ ಹಾರಿದ್ದಾರೆ. ಸಿಎಂ ಸಿದ್ದರಾಮಯ್ಯ ಕೂಡಾ ದೆಹಲಿಯಲ್ಲಿ ಸಭೆಯಲ್ಲಿ ಹಾಜರಾಗಿದ್ದು ಅನೇಕ ನಾಯಕರ ಭೇಟಿ ಕೂಡಾ ಮಾಡಿದ್ಧಾರೆ.
ಸಂಯುಕ್ತ ಕಿಸಾನ್ ಮೋರ್ಚಾದ ನಾಯಕರಾದ ರಾಕೇಶ್ ಟಿಕಾಯತ್ ಹಾಗೂ ಡಾ.ಸುನಿಲಂ ಅವರು ದೆಹಲಿಯ ಕರ್ನಾಟಕ ಭವನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಚರ್ಚಿಸಿದರು. ಈ ಸಂದರ್ಭದಲ್ಲಿ ಕಾಂಗ್ರೆಸ್ ಹಿರಿಯ ನಾಯಕರಾದ ಶಾಸಕ ಬಿ.ಆರ್.ಪಾಟೀಲ್ ಅವರು ಉಪಸ್ಥಿತರಿದ್ದರು.
Cheluvaraya Swami : ಸಚಿವ ಕೈಲಾಶ್ ಚೌಧರಿಯನ್ನು ಭೇಟಿಯಾದ ಕೃಷಿ ಸಚಿವ ಚೆಲುವರಾಯಸ್ವಾಮಿ
Narendra Modi : ಪ್ರಧಾನಿ ನರೇಂದ್ರ ಮೋದಿಗೆ ಲೋಕಮಾನ್ಯ ತಿಲಕ ಪ್ರಶಸ್ತಿ ಪ್ರದಾನ