Mysoor News:
ರಾಜ್ಯಾದ್ಯಂತ ಮೊಟ್ಟೆ ವಿವಾದ ತಾರಕಕ್ಕೇರಿದೆ.ಈ ಕಾರಣದಿಂದಾಗಿ ಸರ್ಕಾರದ ಮೊರೆ ಹೋಗಿದ್ದಾರೆ ಮಗ ಡಾ.ಯತೀಂದ್ರ.ವಿಪಕ್ಷ ನಾಯಕ ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆದ ಪ್ರಕರಣ ನಡೆದ ಹಿನ್ನೆಲೆ ಸರ್ಕಾರ ಸಿದ್ದರಾಮಯ್ಯನವರಿಗೆ ಹೆಚ್ಚಿನ ಭದ್ರತೆ ನೀಡಬೇಕು ಎಂದು ಮೈಸೂರಿನಲ್ಲಿ ಪುತ್ರ, ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ. ಈ ಕುರಿತು ರಾಜ್ಯ ಸರ್ಕಾರ ಸೂಕ್ತ ಕ್ರಮ ತೆಗೆದುಕೊಳ್ಳಬೇಕು. ರಾಜ್ಯದಲ್ಲಿ ಒಬ್ಬ ವಿಪಕ್ಷ ನಾಯಕನಿಗೆ ರಕ್ಷಣೆ ಇಲ್ಲದಂತಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಯುವಮೋರ್ಚಾ ಹಿಂದುತ್ವವಾದಿಗಳು ಹಿಂಸಾತ್ಮಕದಲ್ಲಿ ನಂಬಿಕೆ ಇಟ್ಟಿದ್ದಾರೆ. ಮುಂದೆ ಮತ್ತಷ್ಟು ಹಿಂಸಾತ್ಮಕ ಕೆಲಸ ಮಾಡುವ ಸಾಧ್ಯತೆ ಇದೆ. ಈ ಹಿನ್ನೆಲೆ ಸಿದ್ದರಾಮಯ್ಯ ಅವರಿಗೆ ಸೂಕ್ತ ಭದ್ರತೆ ನೀಡಬೇಕು ಎಂದು ಹೇಳಿದ್ದಾರೆ.
ಸಿದ್ಧರಾಮಯ್ಯಗೆ “ಯೋಚಿಸಿ ಮಾತನಾಡಿ” ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಎಚ್ಚರಿಕೆ..!
ಮೊಟ್ಟೆ ಎಸೆತ ಪ್ರಕರಣ ವಿರುದ್ದ ಮಂಡ್ಯದಲ್ಲಿ ಜಿಲ್ಲಾ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರಿಂದ ಪ್ರತಿಭಟನೆ
‘ಗುಪ್ತಚರ ಇಲಾಖೆ ಐಸಿಯುನಲ್ಲಿದೆ, ಸರ್ಕಾರ ಸತ್ತಿದೆ’: ಕರ್ನಾಟಕ ಕಾಂಗ್ರೆಸ್ ಟ್ವಿಟ್ ಸಮರ