Mysore News : ಮೈಸೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮದ ಜೊತೆ ಮಾತನಾಡಿದ ಸಿಎಂ ಸಿದ್ದರಾಮಯ್ಯ , ಯುವನಿಧಿ ಯೋಜನೆಗೆ ಡಿಸೆಂಬರ್ ಅಥವಾ ಜನವರಿಯಲ್ಲಿ ಚಾಲನೆ ನೀಡಲಾಗುವುದು ಎಂದರು. ಇದೇ ವೇಳೆ ಆಗಸ್ಟ್ 29 ಅಥವಾ 30 ಕ್ಕೆ ಮಹಿಳೆಯರಿಗೆ 2,000 ರೂ.ಸಹಾಯಧನ ನೀಡುವ ಗೃಹಲಕ್ಷ್ಮೀ ಯೋಜನೆಗೆ ಬೆಳಗಾವಿಯಲ್ಲಿ ಚಾಲನೆ ನೀಡಲಾಗುವುದು ಎಂದು ಹೇಳಿದರು.
ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಸಲು ಯಾವುದೇ ಕಾಲ ಮಿತಿ ಇಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ. ಅವರು ಶುಕ್ರವಾರ ಗೃಹಲಕ್ಷ್ಮೀ ಯೋಜನೆಗೆ ಸಂಬಂಧಪಟ್ಟಂತೆ ಮಾಧ್ಯಮಗಳಿಗೆ ಮಾಹಿತಿ ನೀಡುತ್ತ ಈ ಬಗ್ಗೆ ತಿಳಿಸಿದ್ದಾರೆ.
ಆಗಸ್ಟ್ 27 ರಂದು ಬೆಳಗಾವಿಯಲ್ಲಿ ಗೃಹಲಕ್ಷ್ಮೀ ಯೋಜನೆಗೆ ಚಾಲನೆ ನೀಡಲಾಗುವುದು. ಈ ಕಾರ್ಯಕ್ರೆಮಕ್ಕೆ ಕಾಂಗ್ರೆಸ್ ವರಿಷ್ಠರಾದ ಸೋನಿಯಾ ಗಾಂಧಿ, ಪ್ರಿಯಾಂಕಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆಹ್ವಾನ ನೀಡಲಾಗಿದೆ. ರಾಜ್ಯದ 11 ಸಾವಿರ ಕಡೆ ಏಕಕಾಲಕ್ಕೆ ಯೋಜನೆಗೆ ಚಾಲನೆ ಸಿಗಲಿದೆ ಎಂದು ಹೇಳಿಕೆ ನೀಡಿದರು.
Humanities Department : ರಸ್ತೆ ಅಪಘಾತದಲ್ಲಿ ಹೆಚ್ಚಾಗಿ ಸಾವನ್ನಪ್ಪಿದವರು – ದ್ವಿಚಕ್ರ ವಾಹನ ಸವಾರರು..?!
Bjp : ಮಂಡ್ಯ : ಸರ್ಕಾರದ ವಿರುದ್ಧ ಬಿಜೆಪಿಗರ ಆಹೋರಾತ್ರಿ ಧರಣಿ ಸತ್ಯಾಗ್ರಹ