Political News:
ರಾಜ್ಯ ಬಿಜೆಪಿ ನಾಯಕರು ನನ್ನ ವಿರುದ್ದ ಮಾಡಿರುವ ಭ್ರಷ್ಟಾಚಾರದ ಆರೋಪಗಳ ತನಿಖೆಗೆ ನಾನು ಸಿದ್ದನಿದ್ದೇನೆ. ಆದರೆ
ಇದಕ್ಕಿಂತ ಮೊದಲು ನನ್ನ ಸರಳ ಪ್ರಶ್ನೆಯೊಂದಕ್ಕೆ ಉತ್ತರಿಸಿ, ಇಲ್ಲಿಯವರೆಗೆ ಬಾಯಿ ಮುಚ್ಚಿಕೊಂಡಿರುವವರು ಈಗ ಯಾಕೆ ಬಾಯಿ ಬಡಿದುಕೊಳ್ಳುತ್ತಿದ್ದೀರಿ? ಅಧಿಕಾರಕ್ಕೆ ಬಂದು ಮೂರು ಮುಕ್ಕಾಲು ವರ್ಷ ತೆಪ್ಪಗಿದ್ದ ಬಿಜೆಪಿ ನಾಯಕರು ಈಗ ಯಾಕೆ ಈ ಆರೋಪ ಮಾಡುತ್ತಿದ್ದಾರೆ ಎಂದು ಅರ್ಥಮಾಡಿಕೊಳ್ಳುವಷ್ಟು ರಾಜ್ಯದ ಜನ ಪ್ರಬುದ್ದರಿದ್ದಾರೆ. ತಮ್ಮ ಮೈತುಂಬಾ ಮೆತ್ತಿಕೊಂಡಿರುವ ಕಳಂಕವನ್ನು ತೊಡೆದುಹಾಕಲು ನನ್ನ ವಿರುದ್ಧ ಆರೋಪ ಮಾಡುತ್ತಿದ್ದಾರೆ ಎನ್ನುವುದು ಜನರಿಗೆ ತಿಳಿದಿದೆ ಎಂದು ಹೇಳಿದರು.ಮಾತುಮಾತಿಗೆ ಧಮ್, ತಾಕತ್ ಎಂದು ಬೊಬ್ಬಿಡುತ್ತಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಕಾಂಗ್ರೆಸ್ ವಿರುದ್ದದ ಭ್ರಷ್ಟಾಚಾರದ ಬಗ್ಗೆ ಇಲ್ಲಿಯ ವರೆಗೆ ತನಿಖೆ ಮಾಡದೆ ಸುಮ್ಮನಿದ್ದುದು ಯಾಕೆ? ಧಮ್ ತಾಕತ್ ಇರಲಿಲ್ಲವೇ? ಮುಖ್ಯಮಂತ್ರಿ, ಉಪಮುಖ್ಯಮಂತ್ರಿ, ಸಚಿವ ಸ್ಥಾನವೂ ಸೇರಿದಂತೆ ಹಲವಾರು ಅಧಿಕಾರ ಸ್ಥಾನಗಳಲ್ಲಿ ಕಾರ್ಯನಿರ್ವಹಿಸಿದ್ದೇನೆ. ಹದಿಮೂರು ಬಜೆಟ್ ಮಂಡಿಸಿದ್ದೇನೆ. ಇಲ್ಲಿಯ ವರೆಗೆ ಯಾರಾದರೂ ಒಬ್ಬ ಗುತ್ತಿಗೆದಾರ ನನ್ನ ವಿರುದ್ದ ಲಂಚದ ಆರೋಪ ಮಾಡಿದ್ದಾರೆಯೇ?. ನನ್ನ ರಾಜಕೀಯ ಜೀವನ ತೆರೆದ ಕನ್ನಡಿ ಎಂದರು.
ಸಕಲೇಶಪುರ: ಆನೆ ದಾಳಿಗೆ ಒಂಟಿ ಮನೆ ಧ್ವಂಸ ಮನೆಗಳ ಮೇಲಿನ ದಾಳಿ ತೀವ್ರಗೊಳಿಸಿದ ಒಂಟಿ ಕಾಡಾನೆ…!