Political news:
ಭ್ರಷ್ಟಾಚಾರ ಬೆಂಕಿ ಇಲ್ಲದೆ ಹೊಗೆಯಾಡಲ್ಲ
ಇನ್ನು ಸಿಎಂ ಕಚೇರಿಯಲ್ಲಿ ಭ್ರಷ್ಟಾಚಾರ ನಡೆಯುತ್ತಿದೆ ಎಂದು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಮಾಡಿರುವ ಆರೋಪದ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಅದು ಯಾವುದೋ ಸಣ್ಣ ಹುದ್ದೆ ಇರಬೇಕು ಅದಕ್ಕೆ 30 ಲಕ್ಷ ಕೇಳಿದ್ದಾರೆ, ಅಲ್ಲಿ ಕೋಟ್ಯಾಂತರ ರೂಪಾಯಿ ಕೇಳುತ್ತಿದ್ದಾರೆ. ವರ್ಗಾವಣೆ ರದ್ದು ಆಗುವುದು, ಮತ್ತೆ ಅಧಿಕಾರಿ ಬಂದು ವರ್ಗಾವಣೆ ಮಾಡಿಸುವುದು. ಐಎಎಸ್, ಐಪಿಎಸ್ ಅಧಿಕಾರಿಗಳ ಮಾತೆ ಸ್ಪಷ್ಟವಾದ ಸಾಕ್ಷಿ, ಬೆಂಕಿ ಇಲ್ಲದೆ ಹೊಗೆ ಆಡುವುದಿಲ್ಲ ಸಿಎಂ ಸಿದ್ದರಾಮಯ್ಯನವರು ಪ್ರಾಮಾಣಿಕತೆ ಬಗ್ಗೆ ಮಾತನಾಡುತ್ತಾರೆ. ಸಿಎಂ ಕಚೇರಿ ನಡೆದುಕೊಳ್ಳುವ ರೀತಿ ನೋಡಿದರೆ ಭಯ ಆಗುತ್ತಿದೆ ಎಂದು ಹೇಳಿದರು.
ನಮ್ಮಲ್ಲಿ ಎಲ್ಲರೂ ಸಮರ್ಥರು
ವಿಪಕ್ಷ ನಾಯಕನ ಆಯ್ಕೆ ವಿಚಾರಕ್ಕೆ ಸಿಎಂ ಸಿದ್ದರಾಮಯ್ಯ ಟೀಕಿಸಿರುವುದಕ್ಕೆ ತಿರುಗೇಟು ನೀಡಿದ ಅವರು, ಇಲ್ಲಿ ಶಿಸ್ತಿನ ಪ್ರಶ್ನೆ ಇಲ್ಲ ನಾಳೆಯಿಂದ ಅಧಿವೇಶನ ಅಧಿಕೃತವಾಗಿ ಆರಂಭವಾಗಲಿದೆ. ಅಷ್ಟರೊಳಗೆ ವಿಪಕ್ಷನಾಯಕನ ಆಯ್ಕೆಯಾಗಲಿದೆ. ಪ್ರತಿಪಕ್ಷದ ನಾಯಕನಾಗಲು ನಮ್ಮಲ್ಲಿರುವ 66 ಜನರು ಸಮರ್ಥರಿದ್ದಾರೆ ಎಂದರು.
ಬಿಟ್ ಕಾಯಿನ್ ಪ್ರಕರಣ ಎಸ್‌ಐಟಿಗೆ ವಹಿಸಿರುವುದು ಒಳ್ಳೆದಾಯಿತು. ಸರ್ಕಾರ ಯಾವುದೇ ರೂಪದಲ್ಲಿ ತನಿಖೆ ಮಾಡಿಸಲಿ ಎಂದು ಹೇಳಿದರು.