ನನ್ನ ಅಧಿಕಾರ ಅವಧಿಯಲ್ಲಿ ನಾನು ಒಂದು ಪೈಸೇನು ಲಂಚ ತೆಗೆದುಕೊಂಡಿಲ್ಲ.ನಾನು ಲಂಚ ತೆಗೆದುಕೊಂಡಿರುವುದೇ ಆಗಿದ್ದಾರೆ ನಿಮ್ಮ ಹತ್ತಿರ ನಾನು ಲಂಚತೆಗೆದುಕೊಔಡಿರುವ ಬಗ್ಗೆ ದಾಖಲೆಗಳಿದ್ದರೆ ತೋರಿಸಿನಾನು ರಾಜಕಾರಣದಿಂದ ನಿವೃತ್ತಿ ಪಡೆದು ಸನ್ಯಾಸತ್ವ ಸ್ವೀಕರಿಸುತ್ತೇನೆ
ಬಿಜೆಪಿ ಪಕ್ಷದ ಬಗ್ಗೆ ಜನ ಬೆಸತ್ತು ಹೋಗಿದ್ದಾರೆ.ಎಷ್ಟೇ ಯೋಜನೆಗಳನ್ನು ಜಾರಿಗೆ ತರಲಿ ಪ್ರತಿಯೊಂದನ್ನು ಜನ ಪಡೆದುಕೊಳ್ಳಬೇಕೇಂದರೆ ಕಮಿಷನ್ ಕೊಡಲೇಬೇಕು.ಗುತ್ತಿಗೆದಾರರು ಯಾವುದೇ ಕಾಮಗಾರಿ ನಡೆಸಬೇಕೇಂದರೆ . ಪರ್ಸೆಂಟೇಜ್ ಕೊಟ್ಟು ಕಾಮಗಾರಿ ನೆಡೆಸಬೇಕು .
ಅಧಿಕಾರಿಗಳು ಮತ್ತು ರಾಜಕಾರಣಿಗಳು ಎಲ್ಲಾರು ಭಾಗಿಯಾಗಿದ್ದಾರೆ.
ವಿಧಾನಸೌಧದ ಪ್ರತಿ ಗೋಡೆಯು ಲಂಚ ಲಂಚ ಅನ್ನುತ್ತಿದೆ .ರಾಜ್ಯದ ಜನ ಬಿಜೆಪಿ ಆಡಳಿತದಿಂದ ಬೇಸತ್ತಿದ್ದಾರೆ, ನೊಂದಿದ್ದಾರೆ. ಅನೇಕ ಕಷ್ಟಗಳನ್ನು ಅನುಭವಿಸಬೇಕಾದ ಪರಿಸ್ಥಿತಿ ನಿರ್ಮಾಣ ಆಗಿದೆ. ಈಗ ಲಂಚ ಕೊಡದಿದ್ದರೆ ಯಾವುದೇ ಕೆಲಸ ಆಗಲ್ಲ. ಬಿಜೆಪಿಯಂತಹ ಭ್ರಷ್ಡ ಸರ್ಕಾರ ರಾಜ್ಯದಲ್ಲಿ ಯಾವತ್ತೂ ಬಂದಿರಲಿಲ್ಲ. ಮೋದಿಗೆ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಪತ್ರ ಬರೆದಿದ್ದರು. 40% ಕಮಿಷನ್ ಬಗ್ಗೆಯೂ ಕಲಾಪದಲ್ಲಿ ಚರ್ಚೆಗೆ ಅವಕಾಶ ಕೊಡಲಿಲ್ಲ.
ಕಾಗೇರಿಯಂತಹ ಸ್ಪೀಕರ್ ರನ್ನು ನಾನು ಯಾವತ್ತೂ ನೋಡಿಯೇ ಇಲ್ಲ.ನನ್ನ ಅವಧಿಯಲ್ಲಿ ಒಂದು ಪೈಸೆ ಲಂಚ ಸ್ವೀಕರಿಸಿದ್ದನ್ನು ತೋರಿಸಿದರೆ ರಾಜಕೀಯ ನಿವೃತ್ತಿ ತೆಗೆದುಕೊಂಡು ಸನ್ಯಾಸತ್ವ ಸ್ವೀಕರಿಸುತ್ತೇನೆ ಎಂದು ಮಾಜಿ ಸಿಎಂ ಮತ್ತು ವಿಪಕ್ಷ ನಾಯಕ ಸಿದ್ದರಾಮಯ್ಯ ಸವಾಲು ಹಾಕಿದರು. ಕೋಲಾರ ಹೊರವಲಯದ ಟಮಕ ಬಳಿ ಕಾಂಗ್ರೆಸ್ ಸಮಾವೇಶದಲ್ಲಿ ಮಾತನಾಡಿ, ರಾಜ್ಯದ ಜನ ಬಿಜೆಪಿ ಆಡಳಿತದಿಂದ ಬೇಸತ್ತಿದ್ದಾರೆ, ನೊಂದಿದ್ದಾರೆ