ಬೆಂಗಳೂರು: ಬಿಜೆಪಿ ಅಧಿಕಾರಕ್ಕೆ ಬಂದು ಮೂರೂವರೆ ವರ್ಷಗಳಾದರೂ ಮಹಿಳೆಯರ ಪರವಾಗಿ ಯೋಜನೆಗಳನ್ನು ನೀಡಿಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು. ಬೆಂಗಳೂರಿನ ಅರಮನೆ ಮೈದಾನದ ಬಳಿ ಕಾಂಗ್ರೆಸ್ ಆಯೋಜಿಸಿರುವ ‘ನಾ ನಾಯಕಿ’ ಸಮಾವೇಶದಲ್ಲಿ ಮಾತನಾಡಿದ ಅವರು ಬಿಜೆಪಿಯನ್ನು ಟೀಕಿಸಿದರು. ಬಿಜೆಪಿ ಸರ್ಕಾರ ಇವತ್ತು ದೊಡ್ಡದಾಗಿ ಜಾಹೀರಾತು ನೀಡಿದೆ. ಇವರು ಅಧಿಕಾರಕ್ಕೆ ಬಂದು ಇಷ್ಟು ವರ್ಷಗಳಲ್ಲಿ ಮಹಿಳಾ ಪರ ಯೋಜನೆಗಳನ್ನು ನೀಡಿಲ್ಲ. ನಾವು ಪ್ರತಿ ಮನೆಗೆ 200 ಯೂನಿಟ್ ಉಚಿತ ವಿದ್ಯುತ್ ನೀಡುವ ಭರವಸೆ ನೀಡಿದ್ದೇವೆ. ನಾವು ಈ ಭರವಸೆ ನೀಡಿದ ಬಳಿಕ ಬಿಜೆಪಿಯವರಿಗೆ ಈಗ ಎಚ್ಚರವಾಗಿದೆ. ಅವರು ನೀಡಿದ ಭರವಸೆಗಳ ಪೈಕಿ ಈವರೆಗೆ ಕೇವಲ 50-60ರಷ್ಟು ಮಾತ್ರ ಈಡೇರಿವೆ. ಉಳಿದ ಯಾವ ಭರವಸೆಗಳನ್ನೂ ಈಡೇರಿಸಿಲ್ಲ. ಬಿಜೆಪಿ ಪಕ್ಷ ಮಹಿಳೆಯರ ಪರವಾಗಿಲ್ಲ ಎಂದು ಸಿದ್ದರಾಮಯ್ಯ ಆರೋಪಿಸಿದ್ದಾರೆ.
ಪ್ರಿಯಾಂಕ ಗಾಂಧಿಯವರಿಂದ ಐತಿಹಾಸಿಕ ಘೋಷಣೆ
ಎಲ್ಲಿಯವರೆಗೆ ದೇಶದ ಮಹಿಳೆಯರ ಅಭಿವೃದ್ಧಿ ಆಗುವುದಿಲ್ಲವೋ, ಅಲ್ಲಿಯವರೆಗೂ ಭಾರತದ ಅಭಿವೃದ್ಧಿ ಸಾಧ್ಯವಿಲ್ಲ. ಕಾಂಗ್ರೆಸ್ ಮಹಿಳೆಯರಿಗಾಗಿ ಹಲವು ಯೋಜನೆಗಳನ್ನು ಜಾರಿಗೊಳಿಸಿದೆ. ಉದ್ಯೋಗದಲ್ಲಿ ಮಹಿಳೆಯರಿಗೆ ಇರುವ ಮೀಸಲಾತಿಯನ್ನು ಶೇ 30ರಿಂದ 33 ಹೆಚ್ಚಳ ಮಾಡಿದ್ದೇವೆ. ಮತ್ತೆ ನಾವು ಅಧಿಕಾರಕ್ಕೆ ಬಂದರೆ ಮೀಸಲಾತಿ ಪ್ರಮಾಣ ಹೆಚ್ಚಳ ಮಾಡುತ್ತೇವೆ. ಮಹಿಳೆಯರಿಗೆ ರಾಜಕೀಯದಲ್ಲಿ ಶೇ 33 ಮೀಸಲಾತಿ ನೀಡುತ್ತೇವೆ. ವಿಧಾನಸಭೆ, ಪರಿಷತ್, ಲೋಕಸಭೆಯಲ್ಲಿ ಕೂಡ ಮೀಸಲಾತಿ ನೀಡುತ್ತೇವೆ ಎಂದು ಸಿದ್ದರಾಮಯ್ಯ ಭರವಸೆ ನೀಡಿದರು.
‘ನಾ ನಾಯಕಿ’ ಎಂದು ಸ್ವಯಂ ಘೋಷಿಸಿಕೊಳ್ಳುವ ಸ್ಥಿತಿ ಪ್ರಿಯಾಂಕಾ ಗಾಂಧಿಗೆ ಬಂದಿದೆ : ಸಿಎಂ ಬೊಮ್ಮಾಯಿ ವ್ಯಂಗ್ಯ
‘ನಾ ನಾಯಕಿ’ ಸಮಾವೇಶದಲ್ಲಿ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಕೆಪಿಸಿಸಿ ಮಹಿಳಾ ಘಟಕ ಅಧ್ಯಕ್ಷೆ ಪುಷ್ಪಾ ಅಮರನಾಥ್, ಮೋಟಮ್ಮ, ಶಾಸಕಿಯರಾದ ಲಕ್ಷ್ಮೀ ಹೆಬ್ಬಾಳ್ಕರ್, ಅಂಜಲಿ ನಿಂಬಾಳ್ಕರ್ ಭಾಗಿಯಾಗಿದ್ದಾರೆ. ವೇದಿಕೆ ಮುಂಭಾಗ ಕಾಂಗ್ರೆಸ್ ಉಸ್ತುವಾರಿ ಸುರ್ಜೇವಾಲ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಬಿ.ಕೆ.ಹರಿಪ್ರಸಾದ್, ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂಬಿ.ಪಾಟೀಲ್ ಉಪಷ್ಠಿತರಿದ್ದರು.
ನಾ ನಾಯಕಿ ಸಮಾವೇಶ : ಕಾಂಗ್ರೆಸ್ ನಿಂದ ಪ್ರಿಯಾಂಕಾ ಗಾಂಧಿಗೆ ಅದ್ದೂರಿ ಸ್ವಾಗತ
‘ನಾ ನಾಯಕಿ’ ಎಂದು ಸ್ವಯಂ ಘೋಷಿಸಿಕೊಳ್ಳುವ ಸ್ಥಿತಿ ಪ್ರಿಯಾಂಕಾ ಗಾಂಧಿಗೆ ಬಂದಿದೆ : ಸಿಎಂ ಬೊಮ್ಮಾಯಿ ವ್ಯಂಗ್ಯ