Wednesday, October 15, 2025

Latest Posts

ಜೂ. 29 ಕ್ಕೆ ಪ್ರಧಾನಿ ಮೋದಿ ಭೇಟಿಯಾಗಲಿರುವ ಸಿಎಂ ಸಿದ್ದರಾಮಯ್ಯ

- Advertisement -

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ದೆಹಲಿಗೆ ಪ್ರಯಾಣ ಬೆಳೆಸಿದ್ದು, ಜೂನ್ 29ರಂದು ಪ್ರಧಾನಿ ನರೇಂದ್ರ ಮೋಧಿಯವರನ್ನು ಬೆಟಿ ಮಾಡಲಿದ್ಧಾರೆ. ಜೂ. 29 ರ ಬೆಳಗ್ಗೆ  8.00ಗಂಟೆಗೆ ಪ್ರಧಾನಿಗಳ ಭೇಟಿಗೆ ಸಮಯ ನಿಗದಿಯಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ವಿಧಾನಸೌಧದ ಪೂರ್ವ ದಿಕ್ಕಿನಲ್ಲಿರುವ ನಾಡಪ್ರಭು ಕೆಂಪೇಗೌಡರ 515 ನೇ ಜಯಂತಿ ಅಂಗವಾಗಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ನಂತರ ಮಾಧ್ಯಮ ದವರೊಂದಿಗೆ ಮಾತನಾಡಿ ಈ ವಿಚಾರ ತಿಳಿಸಿದರು.

ರಾಜ್ಯದಿಂದ ಗೆದ್ದಿರುವ ಎಲ್ಲಾ ಲೋಕಸಭಾ ಹಾಗು ರಾಜ್ಯಸಭಾ ಸದಸ್ಯರನ್ನು, ಹಾಗೂ ಕೇಂದ್ರದ ಮಂತ್ರಿಗಳನ್ನು ಭೇಟಿ ಮಾಡಲಾಗುವುದು. ಕೇಂದ್ರದಲ್ಲಿ ರಾಜ್ಯ ಸರ್ಕಾರದ ಯೋಜನೆಗಳ ಪಟ್ಟಿ ನೀಡಿ ರಾಜ್ಯ ಸರ್ಕಾರದ ಪರವಾಗಿ ಎಲ್ಲರೂ ಈ ಯೋಜನೆಗಳನ್ನು ಮಂಜೂರು ಮಾಡಿಸುವುದು, ಹಣ ಬಿಡುಗಡೆ ಮಾಡಿಸುವುದು, ಸಂಪನ್ಮೂಲ ಹೆಚ್ಚು ಮಾಡಲು ಪ್ರಯತ್ನ ಪಡಬೇಕೆಂದು ತಿಳಿಸಲು ನೂತನ ಸಂಸದರನ್ನು ಭೇಟಿ ಮಾಡಲಾಗುವುದು ಎಂದರು.

ವಿಶೇಷವಾಗಿ ನಮ್ಮ ಸಚಿವರೂ ಕೂಡ ಜೊತೆಗೂಡಿದ್ದು, ಪ್ರಧಾನಮಂತ್ರಿ ಭೂಸಾರಿಗೆ ಸಚಿವರು,ರೈಲ್ವೆ, ನೀರಾವರಿ , ಗೃಹ ಸಚಿವರು ಹಾಗೂ ಹಣಕಾಸು ಸಚಿವರನ್ನು ಭೇಟಿ ಮಾಡಲಿರುವುದಾಗಿ ಹೇಳಿದರು. ಗೃಹಸಚಿವರು ಭೇಟಿಗೆ ಇನ್ನೂ ಸಮಯ ನಿಗದಿಮಾಡಿಲ್ಲ. ಶೀಘ್ರವೇ ಮಾಡುತ್ತಾರೆ. ನಿತಿನ್ ಗಡ್ಕರಿಯವರು ಸಮಯ ನಿಗದಿ ಮಾಡಿದ್ದಾರೆ ಎಂದು ತಿಳಿಸಿದರು.

ಹೊಸ ಸರ್ಕಾರದಿಂದ ಮಂಡಿಸಲಾಗುವ ಬಜೆಟ್ ನಲ್ಲಿ ಕರ್ನಾಟಕ ನಿರೀಕ್ಷೆ ಮಾಡುವ ಕೆಲಸಗಳ ಪಟ್ಟಿಯನ್ನು ಕಂದಾಯ ಸಚಿವರು ಈಗಾಗಲೇ ಮಂಡಿಸಿದ್ದಾರೆ ಎಂದರು.

- Advertisement -

Latest Posts

Don't Miss