ಸಿದ್ದಾರ್ಥ್ ಮತ್ತು ಕಿಯಾರಾ ಅಡ್ವಾಣಿಗೆ ಅಭಿನಂದನೆ ತಿಳಿಸುತ್ತಿದ್ದಾರೆ. ಮದುವೆಯ ಫೋಟೋಗಳು ವೈರಲ್ ಆಗಿವೆ.

ಬಾಲಿವುಡ್ನ ಕೆಲವೇ ಮಂದಿಗೆ ಮಾತ್ರ ವಿವಾಹವನ್ನು ಕಣ್ತುಂಬಿಕೊಳ್ಳುವ ಅವಕಾಶ ಸಿಕ್ಕಿತು. ಮದುವೆ ಕಾರ್ಯಗಳು ಪೂರ್ಣಗೊಂಡ ಬಳಿಕ ಸಿದ್ದಾರ್ಥ್ ಮಲ್ಹೋತ್ರಾ ಮತ್ತು ಕಿಯಾರಾ ಅಡ್ವಾಣಿ ಅವರು ಮುಂಬೈಗೆ ಹೊರಟಿದ್ದಾರೆ.

ಈ ವೇಳೆ ಅವರು ಜೈಸಲ್ಮೇರ್ ವಿಮಾನ ನಿಲ್ದಾಣದಲ್ಲಿ ಕಾಣಿಸಿಕೊಂಡಿದ್ದಾರೆ. ಮದುವೆ ನಂತರ ಮೊದಲ ಬಾರಿಗೆ ಜೋಡಿಯಾಗಿ ಬಂದ ಸಿದ್ದಾರ್ಥ್ ಮತ್ತು ಕಿಯಾರಾ ಅಡ್ವಾಣಿ ಅವರ ಫೋಟೋ ಕ್ಲಿಕ್ಕಿಸಲು ಪಾಪರಾಜಿಗಳು ಮುಗಿಬಿದ್ದರು



