Banglore News:
ಬಳ್ಳಾರಿ ನಗರದಲ್ಲಿ ಕುರುಬ ಸಂಘದ ವಾಣಿಜ್ಯ ಮಳಿಗೆ ಹಾಗೂ ವಿದ್ಯಾರ್ಥಿ ನಿಲಯ ಉದ್ಘಾಟಿಸಿ ಮಾತನಾಡಿದ ಶ್ರೀರಾಮುಲು, ಭಗವಂತ ಅವಕಾಶ ಕೊಟ್ಟರೆ ಕಾಂಗ್ರೆಸ್ ಪಕ್ಷದಿಂದ ಸಿದ್ದರಾಮಯ್ಯ ಅವರು ಮತ್ತೆ ಮುಖ್ಯಮಂತ್ರಿಯಾಗಲಿ ಎಂದು ಆಸೆ ಪಡುವ ವ್ಯಕ್ತಿಗಳಲ್ಲಿ ನಾನೂ ಒಬ್ಬ ಎಂದು ಸಚಿವ ಬಿ. ಶ್ರೀರಾಮುಲು ಅವರು ಸಿದ್ದರಾಮಯ್ಯರನ್ನು ಹಾಡಿ ಹೊಗಳಿದ್ದರು. ಈ ಬಗ್ಗೆ ಸ್ಪಷ್ಟನೆ ನೀಡಲು ಭರದಲ್ಲಿ ಮತ್ತೆ ಪೇಜೆಗೆ ಸಿಲುಕಿದ್ದಾರೆ. ಇನ್ನು ಈ ಹೇಳಿಕೆ ಕುರಿತಾಗಿ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಗೆ ಸಚಿವ ಶ್ರೀರಾಮುಲು ಸ್ಪಷ್ಟೀಕರಣ ನೀಡಿದ್ದಾರೆ. ಸಿದ್ದರಾಮಯ್ಯ ಸಿಎಂ ಆಗಲಿ ಎಂಬ ಅರ್ಥದಲ್ಲಿ ನಾನು ಹೇಳಿಲ್ಲ. ಡಿಕೆಶಿ, ಅವರ ನಡುವಿನ ಜಗಳ ನೋಡಿ ನಾನು ಹೇಳಿದ್ದೇನೆ. ನಮ್ಮ ಪಕ್ಷಕ್ಕೆ ಬರಲಿ ಅಂತ ಹೇಳಿದ್ದು ಎಂದು ಬೆಂಗಳೂರಿನಲ್ಲಿ ಸಾರಿಗೆ ಸಚಿವ ರಾಮುಲು ಸ್ಪಷ್ಟನೆ ನೀಡಿದ್ದಾರೆ.
ಬಿಜೆಪಿ ರಾಷ್ಟ್ರೀಯ ಸಂಸದೀಯ ಮಂಡಳಿಯಲ್ಲಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪಗೆ ದೊಡ್ಡ ಜವಾಬ್ದಾರಿ




