Banglore News:
ನಗರಾಭಿವೃದ್ಧಿ ಇಲಾಖೆ ರೂಪಿಸಿರುವ ನಿಯಮಗಳ ಪ್ರಕಾರ, ಚಿಲ್ಲರೆ ವ್ಯಾಪಾರ ಮಾಡುವ ಸಣ್ಣ ಅಂಗಡಿಗಳೂ ಸಹ ತಂಬಾಕು ಮತ್ತು ಸಿಗರೇಟ್ ಮಾರಾಟಕ್ಕೆ ಕಡ್ಡಾಯವಾಗಿ ಪರವಾನಗಿ ಪಡೆಯಬೇಕಾಗುತ್ತದೆ. ಇಲ್ಲವಾದರೆ, ನಿರ್ದಿಷ್ಟ ಸ್ಥಳಗಳಲ್ಲಿ ಅವುಗಳನ್ನು ಮಾರಾಟ ಮಾಡಲು ಅವಕಾಶ ಇರುವುದಿಲ್ಲ.
‘ತಂಬಾಕು ಮತ್ತು ಸಿಗರೇಟ್‌ಗಳನ್ನು ಮಾರಾಟ ಮಾಡುವ ಅಂಗಡಿಗಳು ಶಾಲೆಗಳು ಮತ್ತು ಕಾಲೇಜುಗಳ ಸಮೀಪ ಹಾಗೂ ಪ್ರಾರ್ಥನಾ ಮಂದಿಗಳು, ವಸತಿ ಪ್ರದೇಶಗಳಲ್ಲಿ ವ್ಯಾಪಾರ ನಡೆಸುವುದನ್ನು ತಡೆಯುವ ನಿಟ್ಟಿನಲ್ಲಿ ಕಾನೂನು ರೂಪಿಸಲಾಗುತ್ತಿದೆ. ಸಾರ್ವಜನಿಕವಾಗಿ ಧೂಮಪಾನವನ್ನು ನಿಯಂತ್ರಿಸಲು ಇದರಿಂದ ಅನುವಾಗಲಿದೆ. ಇದು ಎಲ್ಲರ ಒಳಿತಿಗಾಗಿಯೇ ಮಾಡಲಾಗುತ್ತಿದೆ ‘ ಎಂದು ನಗರಾಭಿವೃದ್ಧಿ ಇಲಾಖೆ ಸಚಿವ ಬೈರತಿ ಬಸವರಾಜು ಹೇಳಿಕೆ ನೀಡಿದ್ದಾರೆ.
ಗಣೇಶ ಮೂರ್ತಿ ಪ್ರತಿಷ್ಠಾಪಿಸಲು ಬರುವ ಅರ್ಜಿಗಳಿಗೆ ತ್ವರಿತವಾಗಿ ಅನುಮತಿಗೆ ಬಿಬಿಎಂಪಿ ಮುಖ್ಯ ಆಯುಕ್ತರ ಸೂಚನೆ