- Advertisement -
ನವದೆಹಲಿ : ರಾಷ್ಟ್ರ ರಾಜಧಾನಿಯಲ್ಲಿ 22 ದಿನಗಳ ನಂತರ ಮೊದಲ ಬಾರಿಗೆ ಗಾಳಿಯ ಗುಣಮಟ್ಟದಲ್ಲಿ ಗಣನೀಯ ಸುಧಾರಣೆ ಕಂಡು ಬಂದಿದೆ. ಬುಧವಾರ ಬೆಳಗ್ಗೆ ಹೊತ್ತಿಗೆ ದೆಹಲಿಯಲ್ಲಿ ವಾಯು ಗುಣಮಟ್ಟ ಸೂಚ್ಯಂಕವು 280ಕ್ಕೆ ಇಳಿಕೆಯಾಗಿದೆ.
ಭಾನುವಾರದಂದು ಗಂಟೆಗೆ 20 ಕಿಮೀ ಮತ್ತು ಸೋಮವಾರ 25 ಕಿಮೀ ವೇಗದಲ್ಲಿ ಗಾಳಿ ಬೀಸುತ್ತಿದ್ದು, ಗಾಳಿಯ ಗುಣಮಟ್ಟ ಮತ್ತು ಗೋಚರತೆಯಲ್ಲಿ ಗಮನಾರ್ಹ ಸುಧಾರಣೆಗೆ ಕಾರಣವಾಯಿತು ಎಂದು ಭಾರತೀಯ ಹವಾಮಾನ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.
- Advertisement -