- Advertisement -
ಬರ್ಮಿಂಗ್‍ಹ್ಯಾಮ್: ಇಂದು ನಡೆಯುವ ಕಾಮನ್‍ವೆಲ್ತ್ ಕ್ರೀಡಾಕೂಟದ ಉದ್ಘಾಟನಾ ಸಮಾರಂಭದಲ್ಲಿ ಒಲಿಂಪಿಕ್ ಪದಕ ವಿಜೇತೆ ಪಿ.ವಿ.ಸಿಂಧು ತ್ರಿವರ್ಣ ಧ್ವಜ ಹಿಡಿದು ಭಾರತ ತಂಡವನ್ನು ಮುನ್ನಡೆಸಲಿದ್ದಾರೆ.
2018ರ ಕಾಮನ್‍ವೆಲ್ತ್ ಕ್ರೀಡಾಕೂಟದಲ್ಲಿ ಪಿ.ವಿ.ಸಿಂಧು ಭಾರತ ತಂಡವನ್ನು ಮುನ್ನಡೆಸಿದ್ದರು.
ಆ ಕ್ರೀಡಾಕೂಟದ ಮಿಶ್ರ ಡಬಲ್ಸ್‍ನಲ್ಲಿ ಚಿನ್ನ ಗೆದ್ದಿದ್ದರು. ಸಿಂಗಲ್ಸ್ ವಿಭಾಗದಲ್ಲಿ ಬೆಳ್ಳಿ ಪದಕ ಗೆದ್ದು ಮಿಂಚಿದ್ದರು.
ಇಂದು ನಡೆಯುವ ಉದ್ಘಾಟನಾ ಸಮಾರಂಭದಲ್ಲಿ ಪಿ.ವಿ.ಸಿಂಧು ತ್ರಿವರ್ಣ ಧ್ವಜ ಹಿಡಿದು ಪಥ ಸಂಚಲನದಲ್ಲಿ ಭಾರತ ತಂಡವನ್ನು ಮುನ್ನಡೆಸಲಿದ್ದಾರೆ ಎಂದು ಭಾರತ ಒಲಿಂಪಿಕ್ ಅಸೋಸಿಯೇಷನ್ ಪ್ರಕಟಣೆಯಲ್ಲಿ ತಿಳಿಸಿದೆ.
ಪ್ರತಿಷ್ಠಿತ ಕ್ರೀಡಾಕೂಟದಲ್ಲಿ ಬ್ಯಾಡ್ಮಿಂಟನ್ ತಾರೆ ಪಿ.ವಿ.ಸಿಂಧು ಚಿನ್ನ ಗೆಲ್ಲಲು ಪಣತೊಟ್ಟಿದ್ದಾರೆ.
- Advertisement -