National Political News: ಪ್ರಸಿದ್ಧ ಗಾಯಕಿ ಅನುರಾಧಾ ಪಡುವಾಲ್ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಇವರು ಇದೇ ಮೊದಲು ರಾಜಕೀಯಕ್ಕೆ ಕಾಲಿರಿಸಿದ್ದು, ಹಿಂದುತ್ವ, ಹಿಂದೂ ಸಂಸ್ಕೃತಿಯನ್ನು ಬೆಂಬಲಿಸುವ ಬಿಜೆಪಿ ಪಕ್ಷಕ್ಕೆ ಸೇರಲು ನನಗೆ ಖಷಿಯಾಗಿದೆ ಎಂದು ಅನುರಾಧಾ ಹೇಳಿದ್ದಾರೆ.
ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಮತ್ತು ಮುಖ್ಯ ವಕ್ತಾರ ಅನಿಲ್ ಬಲುನಿ ಸೇರಿ ಹಲವು ಹಿರಿಯ ನಾಯಕರ ಸಮ್ಮುಖದಲ್ಲಿ ಗಾಯಕಿ ಅನುರಾಧಾ ಪಡುವಾಲ್ ಬಿಜೆಪಿ ಸೇರಿದ್ದಾರೆ. ಇನ್ನು ಅನುರಾಧಾ ಅವರನ್ನು ಬಿಜೆಪಿ ಸ್ಟಾರ್ ಪ್ರಚಾರಕರನ್ನಾಗಿ ಮಾಡಬಹುದು, ಹೆಚ್ಚು ಜವಾಬ್ದಾರಿ ನೀಡುವ ಸಾಧ್ಯತೆ ಇದೆ.
ಅನುರಾಧಾ ಪಡುವಾಲ್ ಹೆಚ್ಚಿನ ಸಂಖ್ಯೆಯಲ್ಲಿ ಭಜನೆ ಆಲ್ಬಂಗಳಲ್ಲಿ ಹಾಡಿದ್ದಾರೆ. ಹಿಂದಿ, ಮರಾಠಿ, ಗುಜರಾತಿ, ಕನ್ನಡ, ಸಂಸ್ಕೃತ, ಬಂಗಾಳಿ, ತಮಿಳು ಸೇರಿ ಹಲವು ಭಾಷೆಗಳಲ್ಲಿ ಹಾಡು ಹಾಡಿದ್ದಾರೆ. ಬಾಲಿವುಡ್‌ನಲ್ಲಿ ಹಲವು ಸಿನಿಮಾಗಳ ಹಾಡಿಗೂ ಕಂಠದಾನ ಮಾಡಿದ ಖ್ಯಾತಿ ಅನುರಾಧಾ ಅವರದ್ದಾಗಿದೆ. ಪ್ರಧಾನಿ ಮೋದಿಯವರನ್ನು ಹೊಗಳಿದ ಅನುರಾಧಾ, ಬಿಜೆಪಿ ಸೇರುತ್ತಿರುವುದು ನಮ್ಮ ಸೌಭಾಗ್ಯ ಎಂದಿದ್ದಾರೆ.
ಈಶ್ವರಪ್ಪ ಅವರು ಪಕ್ಷದ ಹಿತ ಬಿಟ್ಟು ಬೇರೆ ಯೋಚನೆ ಮಾಡಿದವರೇ ಅಲ್ಲ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ
ಬೆಳಗಾವಿಯಲ್ಲಿ ವಿರೋಧದ ಅಲೆಯಿಲ್ಲ. ಕೋರೆಯವರು ನಮ್ಮ ಪರವಾಗಿದ್ದಾರೆ: ಮಾಜಿ ಸಿಎಂ ಶೆಟ್ಟರ್..!
ಚುನಾವಣಾ ಬಾಂಡ್ ಎನ್ನುವುದು ಬಿಜೆಪಿಯ ಕೈಯಲ್ಲಿರುವ ರಾಜಕೀಯ ಸುಲಿಗೆಯ ಬ್ರಹ್ಮಾಸ್ತ್ರವೇ?: ಸಿಎಂ

