- Advertisement -
ಭಾರತೀಯ ಚಿತ್ರರಂಗದ ಹಿರಿಯ ಗಾಯಕ ಎಸ್.ಪಿ.ಬಾಲಸುಬ್ರಹ್ಮಣ್ಯಂ(74) ವಿಧಿವಶರಾಗಿದ್ದಾರೆ. ಕನ್ನಡ, ತೆಲುಗು, ತಮಿಳು, ಮಲಯಾಳಂ, ಹಿಂದಿ, ತುಳಿ ಭಾಷೆಗಳ ಹಾಡಿಗೆ ಎಸ್.ಪಿ.ಬಿ ಧ್ವನಿಯಾಗಿದ್ದರು. ಇಂದು ಮಧ್ಯಾಹ್ನ 1ಗಂಟೆ 4 ನಿಮಿಷಕ್ಕೆ, ಚೆನ್ನೈನ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ನಿಧನರಾಗಿದ್ದಾರೆ. ಈ ಬಗ್ಗೆ ಎಸ್‌ಪಿಬಿ ಪುತ್ರ ಸ್ಪಷ್ಟಪಡಿಸಿದ್ದಾರೆ.
ಈ ಮೊದಲು ಕೊರೊನಾ ಜಯಿಸಿ ಬಂದಿದ್ದ ಎಸ್‌ಪಿಬಿ, ಕೆಲ ದಿನಗಳಿಂದಲೂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಕೊರೊನಾ ನೆಗೆಟಿವ್ ರಿಪೋರ್ಟ್ ಬಂದ ಬಳಿಕವೂ ಎಸ್‌ಪಿಬಿಯವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಆದ್ರೆ ಇಂದು ಚಿಕಿತ್ಸೆ ಫಲಿಸದೇ ಎಸ್‌ಪಿಬಿ ನಿಧನರಾಗಿದ್ದಾರೆ.
ಕೆಲ ದಿನಗಳ ಹಿಂದಷ್ಟೇ ಕೊರೊನಾ ಮತ್ತು ಕೊರೊನಾ ವಾರಿಯರ್ಸ್ ಬಗ್ಗೆ ಬಾಲು ಸರ್ ಹಾಡು ಹಾಡಿದ್ದರು. ಸಾಮಾಜಿಕ ಜಾಲತಾಣದಲ್ಲಿ ಆ ಹಾಡು ತುಂಬಾ ವೈರಲ್ ಆಗಿತ್ತು.
- Advertisement -

