ಹೃದಯಾಘಾತದಿಂದ ಗಾಯಕ ಶಿವಮೊಗ್ಗ ಸುಬ್ಬಣ್ಣ ನಿಧನ

ಬೆಂಗಳೂರು: ಹೃದಯಾಘಾತಕ್ಕೆ ಒಳಗಾಗಿ ಆಸ್ಪತ್ರೆಗೆ ದಾಖಲಾಗಿ, ಚಿಕಿತ್ಸೆ ಪಡೆಯುತ್ತಿದ್ದಂತ ಕನ್ನಡದ ಖ್ಯಾತ ಗಾಯಕ ಶಿವಮೊಗ್ಗ ಸುಬ್ಬಣ್ಣ, ಕಳೆದ ರಾತ್ರಿ ನಿಧನರಾಗಿದ್ದಾರೆ.

ಬೆಂಗಳೂರಿನ ತಮ್ಮ ನಿವಾಸದಲ್ಲಿ ಹೃದಯಾಘಾತಕ್ಕೆ ಒಳಗಾಗಿದ್ದಂತ ಅವರನ್ನು, ಸಮೀಪದ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಬಳಿಕ, ಜಯದೇವ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ನಿನ್ನೆ ರಾತ್ರಿ 10.30ರ ಸುಮಾರಿಗೆ ಅವರು ಚಿಕಿತ್ಸೆ ಫಲಿಸದೇ ಹೃದಯಾಘಾತದಿದಂದ ನಿಧನರಾಗಿದ್ದಾರೆ ಎಂಬುದಾಗಿ ಕುಟುಂಬಸ್ಥರು ತಿಳಿಸಿದ್ದಾರೆ. ಶಿವಮೊಗ್ಗ ಸುಬ್ಬಣ್ಣರಿಗೆ ಭಾಗ್ಯಶ್ರಿ, ಶ್ರೀರಂಗ ಇಬ್ಬರು ಮಕ್ಕಳಿದ್ದಾರೆ.

ಕಾಡು ಕುದುರೆ ಸಿನಿಮಾದ ಕಾಡು ಕುದುರೆ ಓಡಿಬಂದಿತ್ತಾ ಹಾಡಿಗೆ ರಾಷ್ಟ್ರ ಪ್ರಶಸ್ತಿಯನ್ನು ಪಡೆದಿದ್ದರು. ರಜತ ಕಮಲ , ಶಿಶುನಾಳ ಷರೀಫ್ ಪ್ರಶಸ್ತಿ, ರಾಜ್ಯ ಪ್ರಶಸ್ತಿ, ಅಕಾಡೆಮಿ ಪ್ರಶಸ್ತಿ ಸೇರಿ ಹಲವು ಪ್ರಶಸ್ತಿ ನೀಡಿ ಗೌರವಿಸಲಾಗಿತ್ತು. ನೋಟರಿ ಪಬ್ಲಕ್ ಅಲ್ಲಿಯೂ ಅಪಾರ ಸೇವೆ ಸಲ್ಲಿಸಿದ್ದರು. ಶಿವಮೊಗ್ಗ ಸುಬ್ಬಣ್ಣ ಗಾಯಕರಾಗಿ ಜೊತೆಗೆ ವಕೀಲರಾಗಿಯೂ ಸೇವೆ ಸಲ್ಲಿಸಿದ್ದರು.

About The Author