ಬೆಂಗಳೂರು : ಮಾಜಿ ಸಚಿವ ರಮೇಶ್ ಜಾರಕಿಹೊಳಿ(Ramesh Jarkiholi)ಯ ಅತ್ಯಾಚಾರ ಪ್ರಕರಣ ಸಂಬಂಧಿಸಿದಂತೆ ಎಸ್ಐಟಿ (SIT) ಕ್ಲೀನ್ ಚಿಟ್ ನೀಡಿದೆ. ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ (case of CD) ಸಂಬಂಧಿಸಿದಂತೆ ನಿನ್ನೆ ಹೈಕೋರ್ಟ್ ವಿಭಾಗೀಯ ಪೀಠ ವಿಚಾರಣೆ ನಡೆಸಿ ಎಸ್ಐಟಿಗೆ ಅಂತಿಮ ವರದಿ ಸಲ್ಲಿಸಲು ಯಾವುದೇ ಸಮಸ್ಯೆಯಲ್ಲ ಎಂದು ಹೇಳಿದ್ದು, ಆದ್ದರಿಂದ ಇಂದು ಎಸ್ಐಟಿ 150 ಪುಟಗಳ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದೆ. ಸಾಕ್ಷ್ಯಾಧಾರ ಕೊರತೆ ಹಿನ್ನೆಲೆಯಲ್ಲಿ ಬಿ ರಿಪೋರ್ಟ್ (B Report) ಸಲ್ಲಿಕೆ ಮಾಡಲಾಗಿದೆ. ಆರೋಪಿತ ಯುವತಿ ನನ್ನ ಮೇಲೆ ಅತ್ಯಾಚಾರ ನಡೆದಿದೆ ಎಂದು ಕಬ್ಬನ್ ಪಾರ್ಕ್ ಪೊಲೀಸ್ ಠಾಣೆ (Cubbon Park Police Station) ವ್ಯಾಪ್ತಿಯಲ್ಲಿ ದೂರು ನೀಡಿದ್ದಳು. ಈಗ ಎಸ್ಐಟಿ ತನಿಖೆ (SIT investigation) ನಡೆಸಿ ಎದುರಿನಲ್ಲಿ ಯಾವುದೇ ಹುರುಳಿಲ್ಲ, ಇಬ್ಬರೂ ಮತದಿಂದ ಲೈಂಗಿಕ ಕ್ರಿಯೆ ನಡೆದಿದೆ ಎಂಬುದು ಆಡಿಯೋದಲ್ಲಿ ಮಾತನಾಡಿರುವುದು ಕಂಡುಬಂದಿದೆ. ಸಾಮಾಜಿಕ ಜಾಲತಾಣಗಳಲ್ಲಿ ಬಾರಿ ಸುದ್ದಿಯಲ್ಲಿದ್ದ ವಿಡಿಯೋವನ್ನು ಎಡಿಟ್ ಮಾಡಲಾಗಿದೆ. ಪ್ರಕರಣದಲ್ಲಿ ಕೇಳಿ ಬಂದಿರುವ ಹಾಗೆ ಆರೋಪಿಗಳು ಬ್ಲಾಕ್ ಅಂಡ್ ವೈಟ್ ದಂಧೆಯಲ್ಲಿ ಭಾಗಿಯಾಗಿದ್ದಾರೆ ಇಂದು ತನಿಖೆಯಲ್ಲಿ ತಿಳಿದುಬಂದಿದೆ. ಇನ್ನೂ ಯುವತಿ ಆಮಿಷವೊಡ್ಡಿ ತನ್ನ ಮೇಲೆ ಅತ್ಯಾಚಾರ ನಡೆಸಲಾಗಿದೆ ಎಂದು ಕೇಸು ದಾಖಲಿಸಿದ್ದು, ಈ ಸಂಬಂಧ ಯಾವುದೇ ಸಾಕ್ಷ್ಯಧಾರ ಲಭ್ಯವಾಗಿಲ್ಲ ಎಂದು ಎಸ್ಐಟಿ 150 ಪುಟಗಳ ಚಾರ್ಜ್ ಶೀಟ್ ಸಲ್ಲಿಸಿದೆ.