ಆಳಂದದ ಮತಗಳ್ಳತನ ಪ್ರಕರಣದ ಬಗ್ಗೆ ಎಸ್‌ಐಟಿ ತನಿಖೆ ನಡೆಯಲಿದೆ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

Political News: ಕಲಬುರಗಿಯ ಆಳಂದ ವಿಧಾನಸಭಾ ಕ್ಷೇತ್ರ ಮತ್ತು ಬೆಂಗಳೂರಿನ ಮಹದೇವಪುರ ಕ್ಷೇತ್ರ ಸೇರಿ, ರಾಜ್ಯದ ಎಲ್ಲಾ ಮತಗಳ್ಳತನ ಪ್ರಕರಣಗಳನ್ನು ಎಸ್‌ಐಟಿಗೆ ನೀಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಇಂದು ಸುದ್ದಿಗೋಷ್ಟಿಯಲ್ಲಿ ಮಾತನಾಡಿರುವ ಅವರು, ಆಳಂದ ಕ್ಷೇತ್ರದಲ್ಲಿ ಸುಮಾರು 6,000 ಮತದಾರರ ಹೆಸರನ್ನು ಕೈಬಿಟ್ಟಿರುವ ಮತಗಳ್ಳತನದ ವಿಚಾರವನ್ನು ಲೋಕಸಭೆಯ ವಿರೋಧ ಪಕ್ಷದ ನಾಯಕರಾದ ರಾಹುಲ್ ಗಾಂಧಿಯವರು ಉಲ್ಲೇಖಿಸಿದ್ದಾರೆ. ಆಳಂದದ ಮತಗಳ್ಳತನ ಪ್ರಕರಣದ ಬಗ್ಗೆ ಎಸ್‌ಐಟಿ ತನಿಖೆ ನಡೆಯಲಿದೆ ಎಂದಿದ್ದಾರೆ.

ರಾಜ್ಯದಲ್ಲಿ ಭಾರಿ ಮಳೆಯಿಂದ ಸಂಭವಿಸಿರುವ ಬೆಳೆಹಾನಿ ಬಗ್ಗೆ ಜಂಟಿ ಸಮೀಕ್ಷೆ ನಡೆಸಲಾಗುತ್ತಿದ್ದು, ವರದಿ ಬಂದ ನಂತರ ಬೆಳೆ ಪರಿಹಾರ ನೀಡಲಾಗುವುದು. ಗದಗ ಜಿಲ್ಲೆಯಲ್ಲಿ ಇನ್ನೆರೆಡು ದಿನಗಳಲ್ಲಿ ಜಂಟಿಸಮೀಕ್ಷೆಯು ಪೂರ್ಣಗೊಳ್ಳಲಿದೆ ಎಂದು ಸಿಎಂ ಹೇಳಿದ್ದಾರೆ.

ಈ ಬಾರಿ ರಾಜ್ಯದಲ್ಲಿ ಹೆಚ್ಚಿನ ಮಳೆಯಾಗಿರುವ ಕಾರಣ, ರಸ್ತೆಗಳು ಹಾಳಾಗಿರುವುದು ನಿಜ. ಈ ಬಗ್ಗೆ ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳ ಪರಿಸ್ಥಿತಿ ಬಗ್ಗೆ ಸಭೆ ನಡೆಸಿ, ಸೂಕ್ತ ಕ್ರಮ ತೆಗೆದುಕೊಳ್ಳಲು ಸೂಚನೆ ನೀಡಲಾಗುವುದು. ಬಿಜೆಪಿ ಸರ್ಕಾರದ ಅವಧಿಯಲ್ಲಿ ಹೊಸ ರಸ್ತೆಗಳು ನಿರ್ಮಾಣ ಆಗಿರಲಿಲ್ಲ, ಗುಂಡಿಗಳನ್ನೂ ಮುಚ್ಚಿರಲಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

About The Author