Hubli News: ಹುಬ್ಬಳ್ಳಿ: ಕಾರ್ಮಿಕ ಇಲಾಖೆಯ ಸಚಿವರಾಗಿ ಸಂತೋಷ ಲಾಡ್ ಮಹತ್ವದ ಕಾರ್ಯದ ಮೂಲಕ ಶ್ರಮಿಕ ವರ್ಗದ ಜನರ ಪಾಲಿಗೆ ವರವಾಗಿದ್ದಾರೆ. ಈ ನಿಟ್ಟಿನಲ್ಲಿ ಧಾರವಾಡ ಜಿಲ್ಲೆಯ ಅಸಂಘಟಿತ ಕಾರ್ಮಿಕರಿಗೆ ಈಗ ಸ್ಮಾರ್ಟ್ ಕಾರ್ಡ್ ವಿತರಣೆ ಮಾಡಿರುವುದು ನಿಜಕ್ಕೂ ಹೆಮ್ಮೆಯ ಸಂಗತಿಯಾಗಿದೆ.
ಧಾರವಾಡ ಜಿಲ್ಲೆಯ ವಿವಿಧ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆಯ ಕಾರ್ಯಕ್ರಮವನ್ನು ಹುಬ್ಬಳ್ಳಿಯ ಬೆಂಗೇರಿಯ ಸಂತೆ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದ್ದು, ಕಾರ್ಯಕ್ರಮಕ್ಕೆ ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಹಾಗೂ ಶಾಸಕ ಮಹೇಶ ಟೆಂಗಿನಕಾಯಿ ಚಾಲನೆ ನೀಡಿದರು.
ಹುಬ್ಬಳ್ಳಿಯ ಬೆಂಗೇರಿಯ ಸಂತೆ ಮೈದಾನದಲ್ಲಿ ಕಾರ್ಮಿಕ ಇಲಾಖೆ, ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿ, ಸಾರಿಗೆ ಇಲಾಖೆ, ಜಿಲ್ಲಾ ಆಡಳಿತ ಮತ್ತು ಜಿಲ್ಲಾ ಪಂಚಾಯತ್, ಧಾರವಾಡ ಇವುಗಳ ಸಂಯುಕ್ತ ಆಶ್ರಯದಲ್ಲಿ ಆಯೋಜನೆ ಮಾಡಿದ್ದು, ನೂರಾರು ಜನ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ ಮಾಡಲಾಯಿತು. ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ದಿವ್ಯ ಪ್ರಭು, ಕಾರ್ಮಿಕ ಇಲಾಖೆಯ ಅಧಿಕಾರಿಗಳು ಸೇರಿದಂತೆ ಅನೇಕ ಪ್ರಮುಖರು ಭಾಗವಹಿಸಿದ್ದರು.