National Political News: ಇಂದು ಸಂಸತ್‌ನಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸ್ಮೃತಿ ಇರಾನಿಗೆ ಫ್ಲೈಯಿಂಗ್ ಕಿಸ್ ಕೊಟ್ಟಿದ್ದಾರೆ. ಈ ದೃಶ್ಯ ವೀಡಿಯೋದಲ್ಲಿ ಸೆರೆಯಾಗಿದೆ.
ಈ ಹಿಂದೆ ರಾಹುಲ್ ಗಾಂಧಿ, ಪ್ರಧಾನಿ ಮೋದಿಗೆ ಓಡಿ ಬಂದು ಅಪ್ಪುಗೆ ಕೊಟ್ಟು ಹೋಗಿದ್ದರು. ಇನ್ನೊಮ್ಮೆ ಕಣ್ಣು ಮಿಟುಕಿಸಿದ್ದು ಸುದ್ದಿಯಾಗಿತ್ತು. ಈ ಬಾರಿ ರಾಹುಲ್ ಗಾಂಧಿ, ಸ್ಮೃತಿ ಇರಾನಿಯ ಮಾತನ್ನು ಕಡೆಗಣಿಸಿ, ಹೊರಡುವಾಗ ಅವರಿಗೆ ಫ್ಲೈಯಿಂಗ್ ಕಿಸ್ ಕೊಟ್ಟಿದ್ದಾರೆ. ಈ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿರುವ ಸಚಿವೆ ಸ್ಮೃತಿ ಇರಾನಿ, ಸ್ಪೀಕರ್‌ಗೆ ದೂರು ನೀಡಿದ್ದಾರೆ.
ರಾಹುಲ್ ಗಾಂಧಿಗೆ ರಾಜಸ್ಥಾನದಲ್ಲಿ ಭಾಷಣ ಕಾರ್ಯಕ್ರಮವಿದ್ದ ಕಾರಣಕ್ಕೆ, ಅವರು ಸಂಸತ್ ಅಧಿವೇಶನವನ್ನು ಅರ್ಧಕ್ಕೆ ಬಿಟ್ಟು ಹೊರಟಿದ್ದರು. ಇದೇ ವೇಳೆ ಸ್ಮೃತಿ ಇರಾನಿ, ಅವಿಶ್ವಾಸ ನಿರ್ಣಯದ ಕುರಿತು ಪ್ರತಿಕ್ರಿಯೆ ನೀಡಲು ಮುಂದಾದಾಗ, ರಾಹುಲ್ ಗಾಂಧಿ ಅದನ್ನು ಕಡೆಗಣಿಸಿ, ಹೊರನಡೆಯಲು ಮುಂದಾದಾಗ, ಸ್ಮೃತಿ ಇರಾನಿಗೆ ಫ್ಲೈಯಿಂಗ್ ಕಿಸ್ ಮಾಡಿದ್ದಾರೆ.
ಈ ಬಗ್ಗೆ ಸ್ಮೃತಿ ಇರಾನಿ ಸೇರಿ, ಹಲವು ಬಿಜೆಪಿಗರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಸ್ಮೃತಿ, ಈ ವ್ಯಕ್ತಿ ಅನುಚಿತವಾಗಿ ವರ್ತಿಸಿದ್ದಾರೆ. ಇದನ್ನು ನೋಡಿದಾಗ, ಅವರಿಗೆ ಮತ್ತು ಅವರ ಕುಟುಂಬಸ್ಥರಿಗೆ ಹೆಣ್ಣಿನ ಬಗ್ಗೆ ಯಾವ ಅಭಿಪ್ರಾಯವಿದೆ ಎಂಬುದು ಅರಿವಾಗುತ್ತದೆ. ಸಂಸತ್ತಿನಲ್ಲಿ ಇಂಥ ವರ್ತನೆಯನ್ನು ಹಿಂದೆಂದೂ ಕಂಡಿರಲಿಲ್ಲ ಎಂದು ಸ್ಮೃತಿ ಹೇಳಿದ್ದಾರೆ. ಅಲ್ಲದೇ ಈ ಬಗ್ಗೆ ರಾಹುಲ್ ವಿರುದ್ಧ ಸ್ಪೀಕರ್‌ಗೆ ದೂರನ್ನೂ ನೀಡಿದ್ದಾರೆ.
संसद में लफ़ंगई करते राहुल गांधी… शर्मनाक। pic.twitter.com/UrQxI8sk89
— Amit Malviya (@amitmalviya) August 9, 2023
ನಿಮಗೆ ಪೆಟ್ಟಾಗಿಲ್ಲಾ ತಾನೇ..?: ಬೈಕ್ ಮೇಲಿಂದ ಬಿದ್ದ ವ್ಯಕ್ತಿಯನ್ನು ವಿಚಾರಿಸಿದ ರಾಹುಲ್ ಗಾಂಧಿ..
ಗುತ್ತಿಗೆದಾರರು ಬೇರೆ ನಾಯಕರ ಭೇಟಿ ಮಾಡೋದನ್ನು ತಡೆಯಲಾಗದು: ಡಿಸಿಎಂ ಡಿ.ಕೆ. ಶಿವಕುಮಾರ್
ಭಗವಂತನನ್ನು ಪ್ರಶ್ನೆ ಮಾಡಲಾಗದು, ಆದರೆ ಸ್ಪಂದನಾ ಸಾವು ಘೋರ ಅನ್ಯಾಯ: ಡಿಸಿಎಂ ಡಿ.ಕೆ. ಶಿವಕುಮಾರ್