ಹುಬ್ಬಳ್ಳಿ ಇಎಸ್ಐ ಆಸ್ಪತ್ರೆಯಲ್ಲಿ ಹಾವುಗಳ ಹಾವಳಿ: ಆತಂಕದಲ್ಲಿಯೇ ಸಿಬ್ಬಂದಿ ಹಾಗೂ ಸಾರ್ವಜನಿಕರು

Hubballi News: ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯ ಇಎಸ್ಐ ಆಸ್ಪತ್ರೆಯಲ್ಲಿ ಹಾವುಗಳ ಹಾವಳಿಯೇ ಹೆಚ್ಚಾಗಿದೆ. ಇಲ್ಲಿನ ಜನರು ಹಾಗೂ ಸಿಬ್ಬಂದಿ ಸಾಕಷ್ಟು ಭಯದಲ್ಲಿಯೇ ಓಡಾಡುವಂತಾಗಿದೆ. ಈ ಹಿಂದೆ ಸಾಕಷ್ಟು ಹಾವುಗಳನ್ನು ರಕ್ಷಣೆ ಮಾಡಲಾಗಿತ್ತು. ಆದರೆ ಮತ್ತೆ ಹಾವುಗಳ ಹಾವಳಿ ಹೆಚ್ಚಾಗಿದೆ. ಕಾರ್ಮಿಕ ಇಲಾಖೆಯ ಇಎಸ್ಐ ಆಸ್ಪತ್ರೆಯ ಆವರಣದಲ್ಲಿ ಹಾವುಗಳು ಓಡಾಡುವುದು ಸರ್ವೇ ಸಾಮಾನ್ಯವಾಗಿದೆ. ಇಲ್ಲಿನ ಪರಿಸರದ ಅವ್ಯವಸ್ಥೆಯಿಂದ ಇಂತಹದೊಂದು ಆತಂಕದ ವಾತಾವರಣ ನಿರ್ಮಾಣವಾಗಿದೆ ಎಂದು ಸಾರ್ವಜನಿಕರು ಮಾಹಿತಿ ನೀಡಿದ್ದಾರೆ. ಇನ್ನೂ ಆಸ್ಪತ್ರೆಯ ಆವರಣದಲ್ಲಿ ಓಡಾಡುವ ಕೆರೆ ಹಾವು ಹಾಗೂ … Continue reading ಹುಬ್ಬಳ್ಳಿ ಇಎಸ್ಐ ಆಸ್ಪತ್ರೆಯಲ್ಲಿ ಹಾವುಗಳ ಹಾವಳಿ: ಆತಂಕದಲ್ಲಿಯೇ ಸಿಬ್ಬಂದಿ ಹಾಗೂ ಸಾರ್ವಜನಿಕರು