Sunday, May 26, 2024

Latest Posts

ಹಾಗಾದರೆ ಅದೇ ಬಾಂಧವ್ಯದ ಮೇಲೆ ಮೇಕೆದಾಟು ಅಣೆಕಟ್ಟು ಮಾಡಿಸಲಿ: ದೊಡ್ಡಗೌಡರಿಗೆ ಸಿಎಂ ಸವಾಲ್

- Advertisement -

Political News: ಸಿಎಂ ಸಿದ್ದರಾಮಯ್ಯ ಜೆಡಿಎಸ್ ಮತ್ತು ಬಿಜೆಪಿ ಮೈತ್ರ ಮಾಡಿಕೊಂಡ ಕಾರಣಕ್ಕೆ, ಜೆಡಿಎಸ್ ವಿರುದ್ಧ ಹರಿಹಾಯ್ದಿದ್ದು, ಮೋದಿಯೊಂದಿಗೆ ಮಾಜಿ ಪ್ರಧಾನಿಗಳಾದ ದೇವೇಗೌಡರಿಗೆ ಅವಿನಾಭಾವ ಸಂಬಂಧವಿದೆ ಎಂದು ಹೇಳಿದ್ದಾರೆ. ಹಾಗಾದರೆ ಅದೇ ಬಾಂಧವ್ಯದ ಮೇಲೆ ಮೇಕೆದಾಟು ಅಣೆಕಟ್ಟು ಮಾಡಿಸಲಿ ಎಂದು ಸವಾಲ್ ಹಾಕಿದ್ದಾರೆ.

ತಾವೇ ನಡೆಸಿರುವ ಆಂತರಿಕ ಸಮೀಕ್ಷೆಯಲ್ಲಿ ಬಿಜೆಪಿ ಕೇವಲ 200 ಲೋಕಸಭಾ ಸೀಟುಗಳನ್ನು ಗೆಲ್ಲುವುದೂ ಕಷ್ಟ ಎನ್ನುವುದು ಅವರಿಗೆ ಗೊತ್ತಾಗಿದೆ. ಹೀಗಾಗಿ ತಂತ್ರಗಾರಿಕೆ ಕಾರಣದಿಂದ 400 ಸೀಟು ಗೆಲ್ಲುವುದಾಗಿ ಹೇಳುತ್ತಿದ್ದಾರೆ. ದೇಶದ ಜನರನ್ನು ನಿರಂತರವಾಗಿ ಮೂರ್ಖರನ್ನಾಗಿಸುತ್ತೇವೆ ಎಂದು ಹೊರಟವರೇ ಜನರ ಎದುರು ಮೂರ್ಖರಾಗುತ್ತಾರೆ. ಈ ಬಾರಿ 400 ದಾಟುತ್ತೇವೆ ಎಂದು ಪ್ರಧಾನಿ ನರೇಂದ್ರ ಮೋದಿಯವರು ಹೇಳುತ್ತಾರೆ, ಆದರೆ ಅಭಿವೃದ್ಧಿ ಶೂನ್ಯ ಆಡಳಿತವೇ ಅವರ ಈ ವರೆಗಿನ ಸಾಧನೆ. ಅಭಿವೃದ್ಧಿ ಮಾಡಿದ್ದರೆ ಟ್ರೇಲರ್ ಆರಂಭ ಆಗುತ್ತಿತ್ತು, ಹಾಗಾಗಿ ಇನ್ನು ಬಾಕಿ ಉಳಿದಿರುವುದು ಸುಳ್ಳಿನ ಪಿಕ್ಚರ್ ಮಾತ್ರ ಎಂದು ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ.

ಮಾಜಿ ಪ್ರಧಾನಿ ದೇವೇಗೌಡರು ಮುಂದಿನ ಜನ್ಮದಲ್ಲಿ ಮುಸಲ್ಮಾನನಾಗಿ ಹುಟ್ಟುತ್ತೇನೆ ಎಂದು ಹೇಳಿದ್ದು ನಿಜ. ನರೇಂದ್ರ ಮೋದಿಯವರು ಪ್ರಧಾನಿಯಾದರೆ ದೇಶ ಬಿಟ್ಟು ಹೋಗುತ್ತೇನೆ ಎಂದಿದ್ದರು. ಅವರ ಮಾತನ್ನೇ ನಾನು ಈಗ ನೆನಪು ಮಾಡಿದೆ. ಸತ್ಯ ಹೇಳಿದರೆ ಗರ್ವ ತೋರಿಸಿದಂತೆ ಆಗುತ್ತದಾ? ತಮಗೆ ಮೋದಿಯವರೊಂದಿಗೆ ಅವಿನಾಭಾವ ಸಂಬಂಧವಿದೆ ಎಂದು ದೇವೇಗೌಡರು ಹೇಳಿದ್ದಾರೆ. ಹಾಗಾದರೆ ಅದೇ ಬಾಂಧವ್ಯದ ಮೇಲೆ ಮೇಕೆದಾಟು ಅಣೆಕಟ್ಟು ಮಾಡಿಸಲಿ. ಸುಳ್ಳು ಯಾಕೆ ಹೇಳುತ್ತಾರೆ. ಎನ್.ಡಿ.ಎ ಬಂದರೆ ಮಾಡಿಸುತ್ತೇನೆ ಎನ್ನುವವರು ಈಗಲೇ ಮಾಡಿಸಲಿ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಜೆಡಿಎಸ್‌ನವರು ಮೈತ್ರಿ ಎಂದರೇನು ಎಂದು ಕಳೆದ ಬಾರಿಯೇ ತೋರಿಸಿದ್ದಾರೆ. ಮೈತ್ರಿಯಲ್ಲಿ ನಾಯಕರು ಜೊತೆಯಾಗುವುದು ಮುಖ್ಯವಲ್ಲ, ಜನರು ಒಂದಾಗಬೇಕು. ಜನರು ಯಾವ ಪಕ್ಷಕ್ಕೂ ಸೇರಿದವರಲ್ಲ, ಮೈತ್ರಿ ಮಾಡಿಕೊಂಡಿದ್ದಾರೆ ಎಂದು ನಾಯಕರ ಮಾತು ಕೇಳುವವರಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಕನಿಷ್ಠ 200 ಸ್ಥಾನಗಳನ್ನು ಗೆದ್ದು ತೋರಿಸಿ: ಬಿಜೆಪಿಗೆ ಮಮತಾ ಬ್ಯಾನರ್ಜಿ ಚಾಲೆಂಜ್

ಹುಟ್ಟುಹಬ್ಬಕ್ಕೆ ಅನ್ನದಾನ, ಪ್ರಚಾರ ಮಾಡಬೇಡಿ ಎಂದ ನಟಿ ಸಾರಾ ಅಲಿ ಖಾನ್

ರಾಜರಾಜೇಶ್ವರಿಯ ಆಶೀರ್ವಾದದೊಂದಿಗೆ ಪ್ರಚಾರ ಕಾರ್ಯ ಆರಂಭಿಸಿದ ಡಿಸಿಎಂ ಡಿಕೆಶಿ

- Advertisement -

Latest Posts

Don't Miss