Thursday, April 24, 2025

Latest Posts

ಕೆಲವರಿಗೆ ಈ ನೆಲದ ಕಾನೂನು ಕಟ್ಟಳೆ ಅನ್ವಯ ಆಗುತ್ತಿಲ್ಲವೇನೋ ಎಂಬ ಅನುಮಾನವೂ ಕಾಡುತ್ತಿದೆ: JDS

- Advertisement -

Political News: ಹುಬ್ಬಳ್ಳಿಯಲ್ಲಿ ಕಾಂಗ್ರೆಸ್ ಕಾರ್ಪೋರೇಟರ್ ಮಗಳು ನೇಹಾ ಕೊಲೆ ಪ್ರಕರಣವನ್ನು ಖಂಡಿಸಿ, ಜೆಡಿಎಸ್ ಟ್ವೀಟ್ ಮಾಡಿದೆ.

ಲವ್ ಜಿಹಾದ್ ಮೋಹದ ಪಾಶವನ್ನು ಸಮರ್ಥನೆ ಮಾಡಿಕೊಂಡಿದ್ದ ಇದೇ ಕಾಣದ ಕೈಗಳು, ಈಗ ಹುಬ್ಬಳ್ಳಿ ವಿದ್ಯಾರ್ಥಿನಿ ಕುಮಾರಿ ನೇಹಾ ಹಿರೇಮಠ ಅವರನ್ನು ಹಾಡುಹಗಲೇ ಕಾಲೇಜು ಆವರಣದಲ್ಲಿಯೇ ಬರ್ಬರವಾಗಿ ಕೊಲೆ ಮಾಡಿದ ವಿಕೃತ ಪಾಪಿಯನ್ನು ರಕ್ಷಿಸಲು ಹೊಂಚು ಹಾಕುತ್ತಿವೆ.

•ಈ ಘಟನೆ ಅತ್ಯಂತ ಆಘಾತಕಾರಿ. ಕಾನೂನು ಸುವ್ಯವಸ್ಥೆ ಹಳಿತಪ್ಪಿದೆ ಎನ್ನುವುದಕ್ಕೆ ಇದೇ ಜ್ವಲಂತ ಉದಾಹರಣೆ. ರಾಜ್ಯ ಕಾಂಗ್ರೆಸ್  ಸರಕಾರದ ಅತಿಯಾದ ತುಷ್ಟೀಕರಣವು ಅಪರಾಧ ಮನೋಭಾವದ ಕಿಡಿಗೇಡಿಗಳಿಗೆ ಅಫೀಮಿನಂತಾಗಿದೆ. ಕೆಲವರಿಗಂತೂ ಈ ನೆಲದ ಕಾನೂನು ಕಟ್ಟಳೆ ಅನ್ವಯ ಆಗುತ್ತಿಲ್ಲವೇನೋ ಎಂಬ ಅನುಮಾನವೂ ಕಾಡುತ್ತಿದೆ. ಈ ಸರಕಾರವೂ ಹಾಗೆಯೇ ವರ್ತಿಸುತ್ತಿದೆ.

ಪ್ರೀತಿ ನಿರಾಕರಿಸಿದ ಕಾರಣಕ್ಕೆ ಜೀವ ತೆಗೆದ ಪರಮ ಪಾಪಿಯನ್ನು ಸುಮ್ಮನೆ ಬಿಡಬಾರದು. ಮುಂದೆ ಇಂತಹ ಘಟನೆಗಳು ನಡೆಯದಂತೆ ಸರಕಾರ ಕಟ್ಟೆಚ್ಚರ ವಹಿಸಬೇಕು. ಆ ನತದೃಷ್ಟ ವಿದ್ಯಾರ್ಥಿನಿಯ ಆತ್ಮಕ್ಕೆ ಚಿರಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇವೆ ಎಂದು ಜೆಡಿಎಸ್ ಟ್ವೀಟ್ ಮಾಡಿದೆ..

- Advertisement -

Latest Posts

Don't Miss