www.karnatakatv.net : ಹುಬ್ಬಳ್ಳಿ: ಮಗಳನ್ನು ತನ್ನ ಜೊತೆಗೆ ಕಳುಹಿಸಲು ನಿರಾಕರಿಸಿದ ಕಾರಣಕ್ಕಾಗಿ ಸಿಟ್ಟಿಗೆದ್ದ ಅಳಿಯನೊಬ್ಬ ಮಾವನ ಕತ್ತು ಸೀಳಿದ ಘಟನೆ ಅಣ್ಣಿಗೇರಿ ತಾಲೂಕಿನ ಹಳ್ಳಿಕೇರಿ ಗ್ರಾಮದಲ್ಲಿ ನಡೆದಿದೆ. ಶಿವಪ್ಪ ದಳವಾಯಿ ಎಂಬಾತನೇ ತೀವ್ರ ಗಾಯಗೊಂಡ ವ್ಯಕ್ತಿಯಾಗಿದ್ದು, ಈತನನಗನು ಚಿಕಿತ್ಸೆಗೆ ಕಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಕಳೆದ ಕೆಲವು ವರ್ಷಗಳ ಹಿಂದೆ ಗದಗ ಜಿಲ್ಲೆಯ ಶಿರಹಟ್ಟಿ ತಾಲೂಕಿನ ಬನ್ನಿಕೊಪ್ಪ ಗ್ರಾಮದ ಜಗದೀಶ್ ಕಂಬಳಿ ಎಂಬಾತನ ಜೊತೆ ಶಿವಪ್ಪ ದಳವಾಯಿ ತನ್ನ ಮಗಳನ್ನು ಕೊಟ್ಟು ಮದುವೆ ಮಾಡಿದ್ದ.ಆದರೆ ಕೆಲವು ದಿನಗಳಿಂದ ಕೌಟುಂಬಿಕ ಸಮಸ್ಯೆಯ ಹಿನ್ನೆಲೆಯಲ್ಲಿ ತವರು ಮನೆ ಹಳ್ಳಿಕೇರಿಯಲ್ಲಿಯೇ ಉಳಿದುಕೊಂಡಿದ್ದ ಪತ್ನಿಯನ್ನು ಅಳಿಯ ಜಗದೀಶ್ ಕಂಬಳಿ ಕರೆಯಲು ಗ್ರಾಮಕ್ಕೆ ಬಂದಿದ್ದ. ಆದರೆ ಮಗಳನ್ನು ಕಳುಹಿಸಲು ಶಿವಪ್ಪ ನಿರಾಕರಿಸಿದ್ದ ಕಾರಣ ಮಾತಿಗೆ ಮಾತು ಬೆಳೆದು ವಿಕೋಪಕ್ಕೆ ಹೋಗಿದೆ. ಆಗ ಸಿಟ್ಟಿಗೆದ್ದ ಜಗದೀಶ್ ಕಂಬಳಿ ಬ್ಲೇಡ್ ನಿಂದ ದಾಳಿ ನಡೆಸಿದ್ದಾನೆ. ತಂದೆಯ ಜೀವ ಉಳಿಸಲು ಬಂದ ಮಗ ಪ್ರವಿಣ ದಳವಾಯಿ ಯ ಕುತ್ತಿಗೆಗೂ ಬ್ಲೇಡ್ ನಿಂದ ದಾಳಿ ನಡೆಸಿದ್ದಾನೆ.
ಘಟನೆಯ ಮಾಹಿತಿ ತಿಳಿದ ಅಣ್ಣಿಗೇರಿ ಠಾಣೆಯ ಪಿಎಸ್ಐ ಎಲ್ ಕೆ ಜೂಲಕಟ್ಟಿ ಆರೋಪಿ ಜಗದೀಶ್ ಕಂಬಳಿಯನ್ನು ವಶಕ್ಕೆ ಪಡೆದಿದ್ದು, ವಿಚಾರಣೆ ನಡೆಸಿದ್ದಾರೆ. ಈ ಕುರಿತು ಅಣ್ಣಿಗೇರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕರ್ನಾಟಕ ಟಿವಿ ಹುಬ್ಬಳ್ಳಿ