ನವದೆಹಲಿ: ರಾಜ್ಯ ರಾಜಕಾರಣದಲ್ಲಿ ಉಂಟಾಗಿರುವ ಬಿಕ್ಕಟ್ಟಿಗೆ ಬಿಜೆಪಿ ಕಾರಣ ಅಂತ ಆರೋಪಿಸಿ ಸಂಸತ್ ಭವನದೆದುರು ಎಐಸಿಸಿ ಅಧಿನಾಯಕಿ ಸೋನಿಯಾ ಗಾಂಧಿ ಹಾಗೂ ಎಐಸಿಸಿ ಮಾಜಿ ಅಧ್ಯಕ್ಷ, ಸಂಸದ ರಾಹುಲ್ ಗಾಂಧಿ ಪ್ರತಿಭಟನೆ ನಡೆಸಿದ್ರು.
ಕರ್ನಾಟದಲ್ಲಿ ದೋಸ್ತಿ ಸರ್ಕಾರವನ್ನು ಪತನಗೊಳಿಸೋ ನಿಟ್ಟಿನಲ್ಲಿ ಬಿಜೆಪಿ ಕುತಂತ್ರ ಮಾಡಿ ಕಾಂಗ್ರೆಸ್-ಜೆಡಿಎಸ್ ಶಾಸಕರನ್ನು ಸೆಳೆದು ಕುತಂತ್ರ ಮಾಡಿದೆ. ಇದು ಪ್ರಜಾಪ್ರಭುತ್ವ ವಿರೋಧಿ ಕೆಲಸ. ಕೂಡಲೇ ಇದನ್ನು ತಡೆಯಬೇಕು ಅಂತ ಇಂದು ಸಂಸತ್ ಭವನದೆದುರು ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ, ಪುತ್ರ ರಾಹುಲ್ ಗಾಂಧಿ ಹಾಗೂ ಪಕ್ಷದ ಹಿರಿಯ ಮುಖಂಡರೊಂದಿಗೆ ಘೋಷಣೆ ಕೂಗೋ ಮೂಲಕ ಪ್ರತಿಭಟನೆ ನಡೆಸಿದ್ರು.
ಅಭಿವೃದ್ಧಿ ಬಗ್ಗೆ ಗಮನ ಹರಿಸದ ಬಿಜೆಪಿ ಸರ್ಕಾರ ತನ್ನ ಕರ್ತವ್ಯ ನಿರ್ವಹಿಸಲು ತೊಂದರೆ ಕೊಡುತ್ತಿದೆ. ಕಾಂಗ್ರೆಸ್ ಆಳ್ವಿಕೆ ಇರುವ ರಾಜ್ಯಗಳಲ್ಲಿ ಬಿಜೆಪಿ ಪ್ರಜಾಪ್ರಭುತ್ವವನ್ನೇ ಮುಗಿಸಲು ಹೊರಟಿದೆ ಅಂತ ಇದೇ ವೇಳೆ ಕಾಂಗ್ರೆಸ್ ಮುಖಂಡರು ಬಿಜೆಪಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ರು.
ಇನ್ನು ಗೋವಾದಲ್ಲೂ ಕೂಡ ರಾಜ್ಯ ರಾಜಕಾರಣದ ಮಾದರಿಯೇ ಕಾಂಗ್ರೆಸ್ ನ 15 ಮಂದಿ ಶಾಸಕರ ಪೈಕಿ 10 ಮಂದಿ ಶಾಸಕರು ಬಿಜೆಪಿ ಸೇರ್ಪಡೆಗೊಂಡಿದ್ದು ಇದೀಗ ಗೋವಾದಲ್ಲಿ ಕಾಂಗ್ರೆಸ್ ಕೇವಲ 5 ಶಾಸಕರನ್ನು ಹೊಂದಿದೆ.
ಕಾಂಗ್ರೆಸ್ ನ 10 ಶಾಸಕರು ಬಿಜೆಪಿಗೆ..!ಮಿಸ್ ಮಾಡದೇ ಈ ವಿಡಿಯೋ ನೋಡಿ