Sunday, July 6, 2025

Latest Posts

ಶೀಘ್ರದಲ್ಲೇ ಕ್ರಿಕೆಟ್ ಹೊಸ ನಾಯಕನ ಹೆಸರು ಘೋಷಣೆ..!

- Advertisement -

www.karnatakatv.net : ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ಟಿ20 ಕ್ರಿಕೆಟ್ ವಿಶ್ವಕಪ್ ಟೂರ್ನಿ ಮುಗಿದ ನಂತರ ನಾಯಕತ್ವವನ್ನು ತೊರೆಯುವುದಾಗಿ ಘೋಷಿಸಿದ್ದಾರೆ. ಶೀಘ್ರದಲ್ಲೇ ಹೊಸ ನಾಯಕನ ಹೆಸರನ್ನು ಘೋಷಿಸಲಿದೆ.

ಹೌದು.. ಈ ಹಿಂದೆ ವಿರಾಟ್ ಕೋಹ್ಲಿ ಭಾರತದ ನಾಯಕತ್ವವನ್ನು ತೊರೆಯುವುದಾಗಿ ಘೋಷಿಸಿದ್ರು, ಈಗ ಈ ನಾಯಕತ್ವ ರೇಸ್ ನಲ್ಲಿ ರೋಹಿತ್ ಶರ್ಮಾ ಅವರ ಹೆಸರು ಕೇಳಿ ಬರುತ್ತಿದೆ. ಹೊಸ ನಾಯಕನ ಆಯ್ಕೆ ಸಲುವಾಗಿ ಚೇತನ್ ಶರ್ಮಾ ನೇತೃತ್ವದ ಆಯ್ಕೆ ಸಮಿತಿ ಸಭೆಗೆ ಸಮಯ ನಿಗದಿಯಾಗಿದೆ. ಐಪಿಎಲ್‌ನಲ್ಲಿ ಯಶಸ್ವಿ ನಾಯಕ ಎನಿಸಿರುವ ರೋಹಿತ್ ಶರ್ಮಾ ಅವರಿಗೆ ತಂಡದ ನಾಯಕತ್ವ ಸಿಗುವುದು ಬಹುತೇಕ ಖಚಿತ ಎನ್ನಲಾಗಿದೆ. ಹಾಗೇ ನ್ಯೂಜಿಲೆಂಡ್ ವಿರುದ್ಧದ ಮುಂಬರುವ ಚುಟುಕು ಕ್ರಿಕೆಟ್ ಸರಣಿಗೆ ರೋಹಿತ್‌ಗೆ ವಿಶ್ರಾಂತಿ ನೀಡಲಾಗಿದೆ. ಹೀಗಾಗಿ ತಾತ್ಕಾಲಿಕವಾಗಿ ಮತ್ತೊಬ್ಬ ಆಟಗಾರನಿಗೆ ನಾಯಕತ್ವದ ಜವಾಬ್ದಾರಿ ವಹಿಸಲಾಗುತ್ತದೆ ಎಂದು ಕ್ರಿಕ್‌ಬಜ್ ವರದಿ ಮಾಡಿದೆ. ಸದ್ಯ ಟಿ20 ತಂಡಕ್ಕೆ ಮಾತ್ರವೇ ಹೊಸ ನಾಯಕನ ಆಯ್ಕೆ ಮಾಡಲಾಗುತ್ತದೆ. ಒಂದುವೇಳೆ ಭಾರತ ತಂಡವು ಮುಂಬರುವ ಚುಟುಕು ವಿಶ್ವಕಪ್‌ನಲ್ಲಿ ರೋಹಿತ್ ನಾಯಕತ್ವದಲ್ಲಿ ಉತ್ತಮ ಪ್ರದರ್ಶನ ನೀಡಿದರೆ, ಏಕದಿನ ಮಾದರಿಯ ನಾಯಕತ್ವವೂ ಕೊಹ್ಲಿ ಕೈಯಿಂದ ಜಾರುವ ಸಾಧ್ಯತೆ ಇದೆ ಎನ್ನಲಾಗಿದೆ.

- Advertisement -

Latest Posts

Don't Miss