State News : ರಾಜ್ಯದಲ್ಲಿ ಮತ್ತೆ ಸೌಜನ್ಯ ಪ್ರಕರಣ ಚುರುಕಾಗಿದ್ದು ಇದೀಗ ಸೌಜನ್ಯ ಕುಟುಂಬಸ್ಥರು ರಾಜ್ಯದ ಮುಖ್ಯಮಂತ್ರಿ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿದ್ದಾರೆ.
ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣವನ್ನು ಮರು ತನಿಖೆ ನಡೆಸುವಂತೆ ಮಹೇಶ್ ಶೆಟ್ಟಿ ತಿಮರೋಡಿ ಜೊತೆಗೆ ಸೌಜನ್ಯ ಹೆತ್ತವರು ತೆರಳಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿದ್ದಾರೆ ಎನ್ನಲಾಗಿದೆ.
ಬೆಂಗಳೂರಿನಲ್ಲಿ ಇಂದು ಅಂದರೆ ಜುಲೈ 26ರಂದು ಮುಖ್ಯಮಂತ್ರಿಯವರನ್ನು ಭೇಟಿಯಾದ ಮಹೇಶ್ ಶೆಟ್ಟಿ ತಿಮರೋಡಿ ಹಾಗೂ ಸೌಜನ್ಯ ಹೆತ್ತವರು ಸಿಎಂ ಬಳಿ ಪ್ರಕರಣದ ಮರು ತನಿಖೆ ನಡೆಸುವಂತೆ ಆಗ್ರಹಿಸಿದ್ದಾರೆ.
ಸೌಜನ್ಯ ಕೊಲೆ ಪ್ರಕರಣದಲ್ಲಿ ಬಂಧಿತನಾಗಿದ್ದ ಸಂತೋಷ್ ರಾವ್ ನಿರ್ದೂಷಿ ಎಂದು ಇತ್ತೀಚೆಗೆ ಕೋರ್ಟ್ ತೀರ್ಪು ನೀಡಿತ್ತು. ಇದರ ಬೆನ್ನಲ್ಲೇ ಮತ್ತೆ 11 ವರ್ಷ ಹಳೆಯ ಪ್ರಕರಣ ಮುನ್ನೆಲೆಗೆ ಬಂದಿತ್ತು. ಸಾಮಾಜಿಕ ಜಾಲತಾಣ ಹಾಗೂ ಮಾಧ್ಯಮಗಳಲ್ಲಿ ಸೌಜನ್ಯ ಪರ ಹೋರಾಟ ಮತ್ತೆ ತೀವ್ರಗೊಂಡಿವೆ ಎನ್ನಲಾಗಿದೆ.
Santosh Lad: ರಾಜ್ಯಾದ್ಯಂತ ರೈತರ ಆತ್ಮಹತ್ಯೆಗಳು ಆಗದಂತೆ ತಡೆಗಟ್ಟವುದು ನಮ್ಮ ಉದ್ದೇಶ : ಸಂತೋಷ್ ಲಾಡ್
Gruha laxmi:ಗೃಹ ಲಕ್ಷ್ಮೀ ಯೋಜನೆ ನೊಂದಾವಣೆ ಕೇಂದ್ರ ಕುರಿತು ಮುಖ್ಯ ಆಯುಕ್ತರ ಅಧ್ಯಕ್ಷತೆಯಲ್ಲಿ ಸಭೆ: