ಬೆಂಗಳೂರು: ನಗರದ ಆರೋಗ್ಯ, ಸುರಕ್ಷತೆಗೆ ಫ್ಲೆಕ್ಸ್ ಒಳ್ಳೆಯದಲ್ಲ. ಇನ್ನು ಮುಂದೆ ಕಾನೂನು ಬಾಹಿರವಾಗಿ ಫ್ಲೆಕ್ಸ್ ಹಾಕಲು ಅವಕಾಶ ನೀಡಬಾರದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬಿಬಿಎಂಪಿ ಆಯುಕ್ತರಿಗೆ ಸೂಚನೆ ನೀಡಿದ್ದಾರೆ.
ರಾಜರಾಜೇಶ್ವರಿನಗರದ ವಿಧಾನಸಭೆ ಕ್ಷೇತ್ರ ವ್ಯಾಪ್ತಿಯಲ್ಲಿನ ಉಲ್ಲಾಳ ಮತ್ತು ಅನ್ನಪೂರ್ಣೇಶ್ವರಿ ನಗರಗಳ ಮುಖ್ಯ ರಸ್ತೆಗೆ ಅಡ್ಡಲಾಗಿ ಕೆಂಗೇರಿ ಹೊರವರ್ತುಲ ರಸ್ತೆಯಿಂದ ಗ್ರೇಡ್ ಸಪರೇಟ್ ನಿರ್ಮಾಣದ ಕಾಮಗಾರಿ ಶಂಕುಸ್ಥಾಪನೆ, ರಾಷ್ಟ್ರೀಯ ಹೆದ್ದಾರಿ ತುಮಕೂರು ರಸ್ತೆ ಜಂಕ್ಷನ್ ನಿಂದ ನಾಯಂಡಹಳ್ಳಿ ಜಂಕ್ಷನ್ ವರೆಗೆ ಮತ್ತು ಸುಮನಹಳ್ಳಿ ಜಂಕ್ಷನ್ ನಿಂದ ಅಂಬೇಡ್ಕರ್ ಕಾಲೇಜಿನವರೆಗೂ ಕಾಂಕ್ರೀಟ್ ತಡೆಗೋಡೆ ನಿರ್ಮಾಣ ಸೇತುವೆಗಳು ಮತ್ತು ಇತರೆ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು.
ಜನ ಫ್ಲೆಕ್ಸ್ ಚಟ ಬಿಡಬೇಕು. ಪ್ಲಾಸ್ಟಿಕ್ ಬಳಕೆಯನ್ನು ಆದಷ್ಟು ಕಡಿಮೆ ಮಾಡಬೇಕು. ಒಂದು ವೇಳೆ ಯಾರಾದರೂ ಕಾನೂನುಬಾಹಿರವಾಗಿ ಫ್ಲೆಕ್ಸ್ ಹಾಕಿದಲ್ಲಿ ಮುಲಾಜಿಲ್ಲದೆ ಕ್ರಮ ಜರುಗಿಸಬೇಕು ಎಂದು ಪಾಲಿಕೆ ಅಧಿಕಾರಿಗಳಿಗೆ ತಾಕೀತು ಮಾಡಿದರು.