Thursday, April 17, 2025

Latest Posts

ರೈತರಿಗೆ ಬಿತ್ತನೆ ಬೀಜ ವಿತರಣೆ: ಕಾರ್ಯಕ್ರಮದ ಉದ್ಘಾಟಿಸಿದ ಸಚಿವ ಎನ್.ಚಲುವರಾಯಸ್ವಾಮಿ

- Advertisement -

Political News: ಜಿ ಎಸ್ ಎಫ್ ಫೌಂಡೇಶನ್. ಭೂ ಸಿರಿ ರೈತ ಉತ್ಪಾದಕರ ಕಂಪನಿ. ಕಂದಾಯ ಇಲಾಖೆ. ಕೃಷಿ ಇಲಾಖೆ. ಅರಣ್ಯ ಇಲಾಖೆ ಹಾಗೂ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ವತಿಯಿಂದ ಬಿತ್ತನೆ ರಾಗಿ ವಿತರಣೆ ಹಾಗೂ ರೈತರ ರತ್ನ ಪ್ರಶಸ್ತಿ ವಿತರಣಾ ಸಮಾರಂಭ ಮಂಡ್ಯ ಜಿಲ್ಲೆಯ ನಾಗಮಂಗಲ ಪಟ್ಟಣದ ಎ. ಪಿ. ಎಂ. ಸಿ ಆವರಣದಲ್ಲಿ ನಡೆಯಿತು.

ಕಾರ್ಯಕ್ರಮವನ್ನು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್. ಚೆಲುವರಾಯಸ್ವಾಮಿ ಧಾನ್ಯ ಕ್ಕೆ ಪೂಜೆ ಸಲ್ಲಿಸಿ. ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟಿಸಿದರು.

ನಂತರ ಮಾತನಾಡಿದ ಅವರು.ಪ್ರತಿ ವರ್ಷದಂತೆ ಈ ವರ್ಷವೂ ಸಹ ರೈತರಿಗೆ ಬಿತ್ತನೆ ಬೀಜವನ್ನು ವಿತರಿಸುವ ಕೆಲಸವನ್ನು ಮಾಡಲಾಗುತ್ತಿದೆ.ಕಡಿಮೆ ಇಳುವರಿ ಹೊಂದಿರುವ ಪ್ರದೇಶದಲ್ಲಿ ಸುಮಾರು 4 ಸಾವಿರ ರೈತರನ್ನು ಆಯ್ಕೆ ಮಾಡಿದ್ದು, ಅವರನ್ನು ಪ್ರೋತ್ಸಾಹಿಸಲು ಪ್ರತಿ ಹೆಕ್ಟೇರ್ ಜಮೀನಿಗೆ 6 ಸಾವಿರ ರೂಪಾಯಿ ಪ್ರೋತ್ಸಾಹ ಹಣವನ್ನು ನೀಡಲಾಗುತ್ತಿದೆ. ಅದರಲ್ಲಿ 4.5ಸಾವಿರ ಪರಿಕರ ಹಾಗೂ 1.5 ಸಾವಿರ ಹಣ ನೇರವಾಗಿ ರೈತರ ಖಾತೆಗೆ ಹಣ ಜಮೆಯಾಗುತ್ತಿದೆ. ಸರ್ಕಾರದ ಯೋಜನೆಗಳನ್ನು‌ ರೈತರು ಸದುಪಯೋಗ ಪಡಿಸಿಕೊಂಡು ಆರ್ಥಿಕವಾಗಿ ಸದೃಢವಾಗುವಂತೆ ತಿಳಿಸಿದರು.

ಬಿತ್ತನೆ ಬೀಜ, ರಾಸಾಯನಿಕ ಗೊಬ್ಬರ ಮಾರಾಟಗಾರರು ಖರೀದಿಗೆ ರೈತರು ಅಧಿಕೃತ ರಶೀದಿ ಪಡೆದುಕೊಳ್ಳಬೇಕು. ಯಾವುದಾರರೂ ತೊಂದರೆ ಇದ್ದಲ್ಲಿ ತಕ್ಷಣ ಅಧಿಕಾರಿಗಳ ಗಮನಕ್ಕೆ ತನ್ನಿ ಎಂದರು.

ಇದೇ ಸಂದರ್ಭದಲ್ಲಿ ರೈತರಿಗೆ ರಾಗಿ ಬಿತ್ತನೆ ಬೀಜಗಳನ್ನು ವಿತರಿಸಿ ಪ್ರಗತಿಪರ ರೈತರಿಗೆ ಆತ್ಮೀಯವಾಗಿ ಸನ್ಮಾನಿಸಲಾಯಿತು. ನಂತರ ಮೃತ ರೈತರ ಕುಟುಂಬಕ್ಕೆ ಸರ್ಕಾರ ವತಿಯಿಂದ 5 ಲಕ್ಷ ಪರಿಹಾರದ ಚೆಕ್ ವಿತರಣೆ ಮಾಡಿದರು. ವೇದಿಕೆಯಲ್ಲಿ ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾದ ಅಶೋಕ್. ಸೇರಿದಂತೆ ಪ್ರಗತಿಪರ ರೈತರು ಹಾಗೂ ಕೃಷಿ. ಅರಣ್ಯ. ತೋಟಗಾರಿಕೆ ಇಲಾಖೆಯ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.

- Advertisement -

Latest Posts

Don't Miss