Sunday, December 1, 2024

Latest Posts

ಮಣಿಕಂಠ ರಾಠೋಡ್‌ ಮೇಲಿನ ಹಲ್ಲೆಯ ಸತ್ಯಾಂಶ ಹೇಳಿದ ಕಲಬುರಗಿ ಎಸ್ಪಿ

- Advertisement -

Kalaburgi News: ಕಲಬುರಗಿ: ಬಿಜೆಪಿ ಮುಖಂಡ ಮಣಿಕಂಠ ರಾಠೋಡ ಮೇಲೆ ಹಲ್ಲೆ ಕಥೆ ಬಗ್ಗೆ ಕಲಬುರಗಿ ಎಸ್ಪಿ ಅಡ್ಡೂರು ಶ್ರೀನಿವಾಸುಲು ಮಾತನಾಡಿದ್ದಾರೆ.

ಮಣಿಕಂಠ ರಾಠೋಡ ಮೇಲಿನ ಹಲ್ಲೆಗೆ ಸಂಬಂಧಿಸಿದಂತೆ ಶಹಾಬಾದ್ ಪೊಲೀಸ ಠಾಣೆಯಲ್ಲಿ ದೂರು ದಾಖಲಾಗಿತ್ತು. ಮಣಿಕಂಠ ರಾಠೋಡ ಮೇಲೆ ಹಲ್ಲೆ ಯಾಗಿರಲಿಲ್ಲ, ಅವರ ಕಾರು ಅಪಘಾತವಾಗಿತ್ತು. ಪ್ರಕರಣ ಕುರಿತು ತನಿಖೆ ಮಾಡಿದಾಗ ಅವರ ಮೇಲೆ ಹಲ್ಲೆಯಾಗಿರಲಿಲ್ಲ, ಅದೊಂದು ಅಪಘಾತ ಪ್ರಕರಣ ವೆಂದು ತನಿಖೆಯಲ್ಲಿ ಬಯಲಾಗಿದೆ.

ಸಾಕ್ಷಿದಾರರ ಹೇಳಿಕೆ ಹಾಗೂ ಪೊಲೀಸ್ ತನಿಖೆಯಲ್ಲಿ ಅಪಘಾತವಾಗಿರುವುದು ಗೊತ್ತಾಗಿದೆ ಎಂದಿದ್ದಾರೆ. ಯಾದಗಿರಿ ಜಿಲ್ಲೆಯ ಗುರಯಮಿಠಕಲ್ ಹತ್ತಿರದ ಚೆಪೆಟ್ಲಾ ಹತ್ತಿರ ಮರಕ್ಕೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ನ್ಯಾಯಾಧೀಶರ ಮುಂದೆ ಸಾಕ್ಷಿದಾರರನ್ನು ಹೇಳಿಕೆ ಪಡೆಯಲಾಗಿದೆ. ಅಪಘಾತವಾದ ಅವರ ಕಾರನ್ನು ಹೈದ್ರಾಬಾದ್ ಶೋರೂಂ ಒಂದರಲ್ಲಿ ಬಿಟ್ಟಿರುವುದು ಪತ್ತೆಯಾಗಿದೆ. ಪ್ರಕರಣದ ಕುರಿತು ತನಿಖೆ ನಡೆಯುತ್ತಿದೆ ಎಂದು ಕಲಬುರಗಿ ಎಸ್ಪಿ ಅಡ್ಡೂರು ಶ್ರೀನಿವಾಸುಲು ಹೇಳಿದ್ದಾರೆ.

‘ಮುಸ್ಲಿಂ ಹಿತರಕ್ಷಣೆ ಮಾಡ್ತೀನಿ ಅಂತಾ ಸಿಎಂ ಹೇಳಿದ್ದಾರೆ. ಅದನ್ನು ದೊಡ್ಡದು ಮಾಡುವ ಅವಶ್ಯಕತೆ ಇಲ್ಲ’

ಜಾತಿ ಕಾರಣಕ್ಕೆ ನನ್ನನ್ನು ಆರ್ಎಸ್ಎಸ್ ಕಚೇರಿ ಪ್ರವೇಶಕ್ಕೆ ನಿರಾಕರಿಸಿದ್ದಾರೆ: ಗೂಳಿಹಟ್ಟಿ ಶೇಖರ್

‘ಡೈನಾಮಿಕ್ ಶಾಸಕ ಬಸವರಾಜ ಪಾಟೀಲ್ ಯತ್ನಾಳ ಅವರು ಸುಖಾಸುಮ್ಮನೆ ಆರೋಪ ಮಾಡ್ತಾ ಇದ್ದಾರೆ’

- Advertisement -

Latest Posts

Don't Miss