ಬೆಂಗಳೂರು: ಜೆಡಿಎಸ್ ಪಕ್ಷಕ್ಕೆ ರಾಜೀನಾಮೆ ನೀಡಿ, ಬಿಜೆಪಿ ಸೇರುವುದಾಗಿ ಘೋಷಣೆ ಮಾಡಿದ್ದಂತ ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿಯವರು, ಇಂದು ಅಧಿಕೃತವಾಗಿ ಬಿಜೆಪಿ ಪಕ್ಷವನ್ನು ಸೇರ್ಪಡೆಯಾಗಿದ್ದಾರೆ.
ಬೆಂಗಳೂರಿನ ತಾಜ್ ವೆಸ್ಟ್ ಎಂಡ್ ಹೋಟೆಲ್ ನಲ್ಲಿ ನಡೆದಂತ ಸರಳ ಸಮಾರಂಭದಲ್ಲಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಸಮ್ಮುಖದಲ್ಲಿ ಇಂದು ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿಯವರು ಬಿಜೆಪಿ ಪಕ್ಷ ಸೇರ್ಪಡೆಯಾದರು.
ಈ ಬಳಿಕ ಮಾತನಾಡಿದಂತ ಅವರು, ಸಭಾಪತಿ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ. ನಮ್ಮಲ್ಲಿ ಉಪ-ಸಭಾಪತಿಗೆ ಬೆಲೆ ಇಲ್ಲ. ತಾಂತ್ರಿಕವಾಗಿ ಏನೇನು ಮಾಡಬೇಕು ಎಂಬುದನ್ನು ನೋಡಿಕೊಂಡು ರಾಜೀನಾಮೆ ನೀಡುತ್ತೇನೆ. ನಾನು ಜೆಡಿಎಸ್ ಬಿಡಲು ರಾಜಕಾರಣ ಕಾರಣ ಎಂದರು.



