Thursday, December 12, 2024

Latest Posts

ಆರ್ ಎಸ್ ಎಸ್ ಬಗ್ಗೆ ಹೇಳಿಕೆ : ಸ್ಪೀಕರ್ ಬಗ್ಗೆ ಹೆಚ್ಡಿಕೆ ಹೇಳಿದ್ದೇನು..?

- Advertisement -

RSS : HD Kumaraswamy ಹುಬ್ಬಳ್ಳಿ : ನಿನ್ನೆ ಸದನದಲ್ಲಿ ಸಭಾಧ್ಯಕ್ಷರು ಪೀಠದ ಗೌರವ ಮರೆತು, ಆರ್ ಎಸ್ ಎಸ್ ಬಗ್ಗೆ ನೀಡಿದ ಹೇಳಿಕೆಯ ಬಗ್ಗೆ ತೀವ್ರ ಅತೃಪ್ತಿ ವ್ಯಕ್ತಡಿಸಿದ ಮಾಜಿ ಮುಖ್ಯಮಂತ್ರಿಗಳು, ಕಾಂಗ್ರೆಸ್ ಪಕ್ಷಕ್ಕೆ ನಿಜಕ್ಕೂ ರೋಷ ಎನ್ನುವುದು ಇದ್ದಿದ್ದರೆ ಸದನದಲ್ಲೇ ಪ್ರತಿಭಟನೆ ಮಾಡಬೇಕಿತ್ತು ಎಂದರು.

ಸಭಾಧ್ಯಕ್ಷರು ಪೀಠದ ಗೌರವ ಮರೆತು ಮಾತನಾಡಿದ್ದಾರೆ. ಅಧಿಕೃತ ಪ್ರತಿಪಕ್ಷ ಸುಮ್ಮನೆ ಕೂತಿತ್ತು ಎಂದು ಅವರು ಪ್ರಹಾರ ನಡೆಸಿದರು.

ದೇಶವನ್ನು ಒಳ್ಳೆಯ ಮಾರ್ಗದಲ್ಲಿ ನಡೆಸುವ ಬದಲು ಹಾಳು ಮಾಡುವ ರೀತಿಯಲ್ಲಿ ಎಲ್ಲರೂ ವರ್ತಿಸುತ್ತಿದ್ದಾರೆ. ಭಾವೈಕ್ಯತೆಯನ್ನು ಕೆಡಿಸುವ ಕೆಲಸ ಆಗುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ  ಹೆಚ್ ಡಿ ಕುಮಾರಸ್ವಾಮಿ ಬೇಸರ ವ್ಯಕ್ತಪಡಿಸಿದರು.

 

- Advertisement -

Latest Posts

Don't Miss